ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯ ಸೋಲು

ಅಹಿತರಿಗೆ ನೀಡದಿರು
ಬೇಡುವೆನು ದೈನ್ಯದಲಿ
ಮಾನರಕ್ಷಣಗೆ”
ಎಂದಾಕೆ ದುಃಖದಲ್ಲಿ
ಕಣ್ಣೀರು ತುಂಬಿದಳು.
ಎರಡು ಚಣ ನಿಲ್ಲುತ್ತ
ಬೆವರನ್ನು ಬಸಿಯುತ್ತ
ಓಡಲಾರದೆ ನಿಂದು
ದೃಷ್ಟಿ ಹಿಂದಕೆ ಸಂದು
ಹಿಂದೆಯೇ ಕಾವುತರು
ಹೆಜ್ಜೆ ಹೆಜ್ಜೆಯ ಬಿಡದೆ
ಮುಂಬರಿದು ಬರುತಿರಲು
ಮತ್ತೆ ಬಿಟ್ಟೋಡಿಹಳು
ಬಾಲೆ ಲಲಿತಾಂಗಿ.

ಭಯದಿಂದ ಓಡುತಿರೆ
ಓಡುತ್ತ ಬೀಳುತಿರೆ
ಸೂರ್ಯನುಂ ಬೀಳುತಿರೆ
ಹೊತ್ತು ಹೋಗುತ ಬಂತು
ಕಪ್ಪಕವಿಯುತ ಬಂತು
ಅಲ್ಲಲ್ಲಿ ತಾರೆಗಳು
ಮಡಿದುವು ಮಿನುಗಿದುವು
ಮಸಕಿನಲ್ಲಿ ಮುಂದೊಂದು
ಹೆದ್ದೊರೆಯು ಕಾಣಿಸಿತು
ಹೆಬ್ಬಾವು ಕಾಣಿಸಿತು

೭೮