ಈ ಪುಟವನ್ನು ಪ್ರಕಟಿಸಲಾಗಿದೆ

ಕೊಂಬು

ಅರಳುಮಲ್ಲಿಗೆ, ಮಲ್ಲಿಗೆವಾಳು,
ಮಲ್ಲಿಗೇನಹಳ್ಳಿ ;
 ಸಿರಸಿ, ಸಂಪಿಗೆ, ಕೂಡುಮಲ್ಲಿಗೆ,
ಹುಲ್ಲೆ ಹಳ್ಳಿ, ಹರವು.


 ಮೇಲು ಹುಲುವತಿ, ಕೀಳು ಹುಲುವತಿ
ಮಾದಲ,ಮುತ್ತೋಣಿ;
 ತಾಳಕುಂಟೆ, ತಾವರೆಕೆರೆ, ಹಿಪ್ಪಲ,
ಕೂದವಳ್ಳಿ, ಕೊಪ್ಪ.


ಸಿರಿಯೂರು, ಸಿರಿಯಂಗಳ, ಬೆಳವಲ,
ಸೊಗದವಾಣಿ, ತೆರವಿ;
 ಮರಳವಾಡಿ, ಮಧುಗಿರಿ, ಬನವಾಸಿ,
ಅಗಳಿ, ಅಮೃತೂರು ;


ಬೆಳಧರ, ಬೆಳ್ಳಿಯಬಟ್ಟಲು, ಬೆಳವಿ,
ನೆಲಮಾವು, ಹಗರಿ;
 ತಳಕು, ಬೆಳುಗೊಳ, ಪಿರಿಚಾಜಿಯೂರು,
ಬಿಳಿಗೆರೆ, ಹೆಬ್ಬಾಲೆ ;

೫೪