೧O೬ | ಜಾಗರ
ಮುಳಿಯ ಮಹಾಬಲ ಭಟ್ಟರು ಪ್ರಬುದ್ಧ ಭಾವಪೂರ್ಣ ಅರ್ಥಗಾರಿಕೆಗೆ ಹೆಸರಾದ
ವರು.
ಸರಳ ಸು೦ದರ ಶೈಲಿಯ ವಿದ್ವಾನ್ ಕಾಂತ ರೈ, ಹಿರಿಯ ವೇಷಧಾರಿ
ಅಳಕೆ ರಾಮಯ್ಯ ರೈ, ಯಕ್ಷಗಾನ ಕವಿ ಸೀತಾನದಿ ಗಣಪಯ್ಯ ಶೆಟ್ಟಿ, ಹೈಗುಂದ
ಪದ್ಮನಾಭಯ್ಯ, ದಿ| ಮಂಗಳೂರು ದೇವಪ್ಪ ಶೆಟ್ಟಿ, ದಿ| ಕೋಟೆಕುಂಜ ನಾರಾಯಣ
ಶೆಟ್ಟಿ, ಕೊರಕ್ಕೋಡು ಭವಾನಿಶಂಕರರಾವ್, ವಿಶಿಷ್ಟ ಅರ್ಥಗಾರಿಕೆಯ ಶೈಲಿಯನ್ನು
ರೂಪಿಸಿರುವ, ಭಾಗವತರೂ, ತುಳು ಕವಿಗಳೂ ಆದ ಮಂದಾರ ಕೇಶವ ಭಟ್,
ದಿ| ಬೊಂಡಾಲ ಜನಾರ್ದನ ಶೆಟ್ಟಿ, ಮಹೋನ್ನತ ಯಕ್ಷಗಾನ ನಟ ದಿ| ಕುರಿಯ
ವಿಠಲ ಶಾಸ್ತ್ರಿ ಇವರೆಲ್ಲ ಈ ಹಂತದ ಮುಖ್ಯ ಅರ್ಥಗಾರರು.
ಈ ಕಾಲದಲ್ಲಿ ವಿಶೇಷವಾಗಿ ಉಲ್ಲೇಖಿಸಬೇಕಾದ ಇನ್ನೊಂದು ಹೆಸರು
ಪ್ರೊ| ಎಂ ಆರ್ ಶಾಸ್ತ್ರಿಗಳದು. ಚೊಕ್ಕ ಮಾತು, ನಾಟಕೀಯ ಪ್ರತಿಭೆಯಿಂದ
ವಿಶೇಷತ: ಸ್ತ್ರೀಪಾತ್ರಗಳಿಂದಲೇ ಹೆಸರು ಪಡೆದ ಶಾಸ್ತ್ರಿಗಳು ಆ ಕಾರಣಕ್ಕಾಗಿಯೇ
ವಿಶಿಷ್ಟ ಸ್ಥಾನಕ್ಕೆ ಅರ್ಹರು.
ಉತ್ತರ ಕನ್ನಡದ ಹಿರಿಯ ಅರ್ಥಧಾರಿಗಳಾದ ದಿ| ಬೈಲಕೇರಿ ಪರಮೇಶ್ವರ
ಪುರಾಣಿಕ, ಕಟ್ಟೆಪರಮೇಶ್ವರ ಭಟ್ಟ, ಕೆರೆಕೈ ಕೃಷ್ಣ ಭಟ್ಟ, ಹಸಿರುಗೋಡು ಲಕ್ಷ್ಮೀ
ನಾರಾಯಣ ಹೆಗ್ಡೆ -ಹೊಸ್ತೋಟ ಮಂಜುನಾಥ ಭಟ್ ಇವರ ಅರ್ಥಗಾರಿಕೆಯ ಶೈಲಿ
ವಿಶಿಷ್ಟವಾದದ್ದು. ಆ ಪ್ರದೇಶದಲ್ಲಿ ಇವರು ಮುಖ್ಯ ಅರ್ಥಧಾರಿಗಳೆನಿಸಿದವರು.
೧೨
1960ರಿಂದ ನಂತರ ಎಂದು ಗುರುತಿಸಬಹುದಾದ ಇಂದಿನ ಹಂತದಲ್ಲಿ ತಾಳಮದ್ದಳೆಯ ಅರ್ಥಗಾರಿಕೆ ಪುನ: ಒಂದು ಬದಲಾವಣೆಯತ್ತ ಸಾಗಿತೆನ್ನಬಹುದು. ಹಿಂದಿನ ಹಂತದ ಅತಿಯಾದ ತರ್ಕ, ದೀರ್ಘ ವಿವರಣೆಗಳಿಂದ ಬಿಡುಗಡೆ ಹೊಂದಿತು. ಒಂದು ರೀತಿಯಲ್ಲಿ “ಲೋಲಕ ಮತ್ತೆ 'ಮಧ್ಯಕ್ಕೆ ಚಲಿಸತೊಡಗಿತು” ಎನ್ನಬಹುದು. ಇದರಿಂದ ತಾಳಮದ್ದಳೆ ವ್ಯವಸ್ಥಿತ, ಅವಯವ ಪುಷ್ಪ, ಆ ಕೃತಿ ಬದ್ಧ ರೂಪಕ್ಕೆ ಬರಲು ಸಹಕಾರಿಯಾಗಿದೆ. ಪ್ರಸಂಗಕ್ಕೂ, ರಸಕ್ಕೂ ನಿಷ್ಟವಾಗಿ ನೂತನ ಅಭಿವ್ಯ ಕ್ತಿಯ ಆವಿಷ್ಕಾರ ನಡೆದಿದೆ. ಅರ್ಥಗಾರಿಕೆ ಪಡೆದ ನಾಜೂಕನ್ನೂ, ವಿಸ್ತಾರವನ್ನೂ ಉಳಿಸಿಕೊಂಡು, ಬೆಳವಣಿಗೆಯನ್ನು ಸ್ಥಿರೀಕರಿಸಿ, ಮುಂದುವರಿಸುವ ಯತ್ನ ನಡೆ ದಿದೆ. ಈ ಹಂತದಲ್ಲಿ ಹಲವು ಹೆಸರುಗಳು ನೆನಪಾದರೂ, ಅನುಕೂಲಕ್ಕೆ ಒಂದು