೪ ಒಂದು ಪದ್ಯಾರ್ಥವನ್ನು ಖಂಡತುಂಡವಾಗಿ ಹೇಳುವುದು ಹಾಗೂ ಇದಿರಾಳಿ
ಯಿಂದ ಪ್ರಶ್ನೆಗಳನ್ನು ಹಾಕಿಸಿಕೊಂಡು ಮುಂದುವರಿಯುವುದು. ಮಾತುಗಳಲ್ಲಿ
ಧ್ವನಿಯನ್ನೂ, ಕುತೂಹಲವನ್ನೂ ನಿರ್ಮಿಸಬೇಕಾದರೆ, ಪೂರ್ತಿ ಅರ್ಥವನ್ನು
ಒಂದೇ ಬಾರಿ ಹೇಳಿ, ಯಾವುದೇ ಪ್ರಶ್ನೆ ಬಾರದಂತೆ ಇದಿರಾಳಿಯನ್ನು ಮಾತನಾಡಿ
ಸುವುದು ದಾರಿಯಲ್ಲ. ಇಬ್ಬರೂ ಸೇರಿ ಸಂವಾದ ರೂಪದಿಂದ ಒಂದು ಪದ್ಯದ ಅರ್ಥ
ಹೇಳುವ ರೀತಿಯಲ್ಲಿ ವಾದಕ್ಕೆ ಸೊಗಸು ಬರುವುದು.
೫ ವೀರರಸದಲ್ಲಿ ಹಾಗೂ ಕೆಲವು ಗಂಭೀರ ಸನ್ನಿವೇಶಗಳಲ್ಲಿ ವಾದ ಚುಟುಕಾಗಿರು
ವುದೊಳಿತು. ಪದ್ಯದ ಪರಿಣಾಮ ಕಂತಿಹೋಗುವ ಮೊದಲು ವಾದಗಳು ಮುಗಿಯ
ಬೇಕು.
೬ ಯಾವುದೇ ಪ್ರಶ್ನೆಗೆ ಎದಿರಾಳಿಯಿಂದ ಉತ್ತರಬಾರದಿದ್ದಾಗ ನೇರ ಮುಂದೆ ಹೋಗಬೇಕು
ಒಂದು ಪ್ರಶ್ನೆ ಅದಕ್ಕೆ ಒಂದು ಉತ್ತರ ಸಾಕು. ಮತ್ತೆ ಬೇಕಾ
ದರೆ ಉಪಪ್ರಶ್ನೆ ಕೇಳಬಹುದು. ಒಂದೇ ಪ್ರಶ್ನೆಯನ್ನು ತಿಕ್ಕುವುದರಿಂದ ಸಂವಾದವು
ಹಾಳಾಗುವುದು,
೭ ಕೌರವ, ರಾವಣರಂತಹ ಖಳ ಪಾತ್ರಗಳು ಇದಿರು ಪಾತ್ರಗಳು ಕೇಳುವ
ಎಲ್ಲಪ್ರಶ್ನೆಗಳಿಗೂ ಉತ್ತರಿಸಬೇಕಾಗಿಲ್ಲ. ಕೆಲವು ಪ್ರಶ್ನೆಗಳನ್ನು ಉತ್ತರಿಸದಿರು
ವುದೇ ಒಳ್ಳೆಯದು, ಇದು ದುಷ್ಟ ಸ್ವಭಾವ - ಚಿತ್ರಣದ ಒಂದು ರೀತಿಯೂ
ಆಗುವುದು.
ಕೌರವ ರಾವಣನಂತಹ ಖಳಪಾತ್ರಗಳು ಇದಿರುಪಾತ್ರಗಳು ಕೇಳುವ ಎಲ್ಲ
ಪ್ರಶ್ನೆಗಳನ್ನು ನಿಜಕ್ಕೂ ಉತ್ತರಿಸಲಾರರು.
ಅವರ ವಾದದಲ್ಲಿ ಪೂರ್ವಪರ
ವಿರೋಧ ಬಂದರೆ ಅದರಲ್ಲಿ ಆಶ್ಚರ್ಯವಿಲ್ಲ. ಅದು ಬರಬೇಕಾದದ್ದೆ, ಆದರೆ
ಸಾತ್ವಿಕ ಪಾತ್ರಗಳು ಆ ಬಗ್ಗೆ ಚರ್ಚಿಸುತ್ತಾ ಇರುವುದು ಸರಿಯಲ್ಲ, ಅದರ ಅಗತ್ಯವೂ
ಇಲ್ಲ.
೮ ಪ್ರಶ್ನೆಗಳು ಪದ್ಯದ ಸನ್ನಿವೇಶದ ಸುತ್ತ ಇರಬೇಕು. “ದೂರದ ಪ್ರಶ್ನೆ ” ಹುಲಿ
ಸವಾರಿಯಂತಾಗುತ್ತದೆ.
೯ ಪ್ರಶ್ನೆಗಳು ಇದಿರುಪಾತ್ರವನ್ನವಲಂಬಿಸಿವೆ. ಹಾಸ್ಯಪಾತ್ರ, ಸ್ತ್ರೀಪಾತ್ರ ಹಾಗೂ
ಸಹಪಾತ್ರ ಇತ್ಯಾದಿ ಪಾತ್ರಗಳು ಹಲವು. ಅಲ್ಲಲ್ಲಿ ಪ್ರಶ್ನೆಗಳೂ ಬೇರೆ ಬೇರೆ ತರಹ
ಇರುತ್ತವೆ.
೧೦ ವಾದದ ಅವಕಾಶದ ಆಯ್ಕೆಯಲ್ಲಿ ಜಾಣ್ಯ ತೋರಿಸಿದಷ್ಟೂ ಕಡಿಮೆಯೇ
ಪುಟ:ಜಾಗರ.pdf/೧೪೫
ಈ ಪುಟವನ್ನು ಪ್ರಕಟಿಸಲಾಗಿದೆ
ಅರ್ಥಗಾರಿಕೆ ವಾದದ ಮಿತಿ / ೧೩೭