೧೪೬ | ಜಾಗರ
ನಮ್ಮಲ್ಲಿದ್ದಾರೆ. ಇವರ ಹಾಸ್ಯಾಭಿವ್ಯಕ್ತಿ ಚುರುಕು ಮತ್ತು ಆಶ್ಚರ್ಯ ಹುಟ್ಟಿಸು
ತ್ತವೆ. ಆದರೆ ಮಾಮೂಲು ಜಾಡು ಹಿಡಿದು ಇವರ ಪ್ರತಿಭೆ ಹಲವು ಸಾರಿ ದಾರಿ
ತಪ್ಪಿ ಅಸ್ಥಾನದಲ್ಲಿ ಅಪವ್ಯಯವಾಗುವುದುಂಟು.
'ಹಾಸ್ಯಗಾರರಲ್ಲದ ನಟರು ನಿಜವಾಗಿಯೂ ಯ ಕ್ಷಗಾನದ ಹಾಸ್ಯಕ್ಕೆ
ಶ್ರೇಷ್ಠ ಕೊಡುಗೆಗಳನ್ನು ನೀಡಿರುವುದು ಒಂದು ವಿಚಿತ್ರ ಸತ್ಯ. ಹಾಗೆ ನೋಡಿದರೆ
ಯಕ್ಷಗಾನ ಹಾಸ್ಯದ ಉತ್ಕೃಷ್ಟ ನಮೂನೆಗಳು, ಅದ್ಭುತ ವೈವಿಧ್ಯಗಳು ಹಾಸ್ಯಗಾರ
ರಲ್ಲದ ನಾಯಕ - ನಟರಿಂದಲೇ ಎಂಬುದನ್ನು ಗಮನಿಸತಕ್ಕದ್ದು. ಉದಾಹರಣೆ
ಗಾಗಿ: ಶೇಣಿ ಗೋಪಾಲಕೃಷ್ಣ ಭಟ್ಟರ ಚಂದಗೋಪ, ಮಾಧವ ಭಟ್ಟ, ವಾಸುದೇವ
ಭಟ್ಟ, ಗೋವಿಂದ ದೀಕ್ಷಿತ, ಚಿತ್ರಾಂಗ ಮುಂತಾದ ಪಾತ್ರಗಳು; ಶಂ ನಾ ಸಾಮಗರ
ಕೈಲಾಸ ಶಾಸ್ತ್ರಿ; ರಾಮದಾಸ ಸಾಮಗರ ಕೈಲಾಸ ಶಾಸ್ತ್ರಿ, ಮಾಧವಭಟ್ಟ,
ಟಿ ಆನಂದ ಮಾಸ್ತರ್, ಕುಂಬಳೆ ಸುಂದರ ರಾವ್ ಮತ್ತು ಕೆ ಗೋವಿಂದ ಭಟ್ಟರ
ಕೆಲವು ಪಾತ್ರಗಳು; ಕಡಬ ಸಾಂತಪ್ಪ ನವರ ಹಾಸ್ಯದ ಮಾತು, ಅಭಿನಯಗಳು,
ಮುಂತಾದುವುಗಳ ಬಗ್ಗೆ ಯಕ್ಷಗಾನಲೋಕ ಹೆಮ್ಮೆ ಪಡಬೇಕಾಗಿದೆ. ಆದರೆ ಒಂದು
ಗಮನಾರ್ಹ ಅಂಶವೆಂದರೆ ಇವರಾರೂ 'ಹಾಸ್ಯಗಾರ' ರಾಗಿ ರಂಗದಲ್ಲಿ ನಟಿಸಿದವರಲ್ಲ.
ಇವರೂ ಸಾಕಷ್ಟು ಔಚಿತ್ಯಭಂಗ ಮಾಡಿದ್ದಾರೆ. ಆದರೆ ಹಾಸ್ಯಕ್ಕೆ ಹೊಸ ಆಯಾಮ
ಮತ್ತು ರೂಪ ಕೊಟ್ಟಿದ್ದಾರೆ.
ಹಾಸ್ಯಗಾರರೆಂದೇ ಖ್ಯಾತರಾಗಿರುವ ಜೋಶಿ ಮುಂತಾದವರು ಬಿಗಿಯಾಗಿ,
ಚೆನ್ನಾಗಿ ಹಾ ಸ್ಯ ನಿ ರೂಪಣೆ ಮಾಡಿದ ಉದಾಹರಣೆಗಳು ಅನೇಕ ಇವೆ. ಆದರೂ
ಯಕ್ಷಗಾನ - ಹಾಸ್ಯದ ಈವರೆಗಿನ ನಡೆ, ಜಾಡುಗಳು ಖಂಡಿತವಾಗಿಯೂ ಔಚಿತ್ಯ
ಪೂರ್ಣವಾಗಿಲ್ಲ. ಈ ಬಗ್ಗೆ ಸಮಗ್ರ ಮೂಲಭೂತ ವಿವೇಚನೆಯನ್ನು ಕಲಾವಿದರು
ನಡೆಸಬೇಕು. ಹಾಸ್ಯನಟರು ಬಳಸುವ ವೇಷಭೂಷಣಗಳು ಯಕ್ಷಗಾನದ ಇತರ
ವೇಷಗಳ ಚಿತ್ರ ಶಿಲ್ಪಶೈಲಿಗೆ ಹೊಂದಿಕೆಯಾಗಿರಬೇಕು. ಈ ಬಗ್ಗೆ ಕೆಲವು ವೇಷ
ಭೂಷಣ ವಸ್ತ್ರಾದಿಗಳನ್ನು ನಿರ್ಮಿಸಬೇಕಾದೀತು. ಇದು ಕಷ್ಟದ ಕೆಲಸವಾಗದು.
'ಜನರು ಬಯಸುತ್ತಾರೆ' ಎಂಬ ನೆಪವೊಡ್ಡಿ ಕೀಳುಮಟ್ಟದ ಹಾಸ್ಯ ರಂಗಕ್ಕೆ
ಬರುವುದು ಬೇಡ. ಜನರ ಅಭಿರುಚಿಯನ್ನು ಕಲಾವಿದ ತಿದ್ದಬೇಕು, ತಿದ್ದಲು
ಸಾಧ್ಯವಿದೆ. ಇಷ್ಟೊಂದು ದೀರ್ಘ ಪರಂಪರೆಯುಳ್ಳ, ಪ್ರಬಲ ವೈಶಿಷ್ಟ್ಯ,
ಸೌಂದರ್ಯಗಳುಳ್ಳ ಒಂದು ಕಲೆಯ ಅಂಗಗಳಿಗೆ ಒಂದು ಶಿಸ್ತು ಬದ್ಧ ರೂಪವನ್ನು
ಕೊಡಲು ಸಾಧ್ಯವಾಗದಿದ್ದರೆ, ನಮಗೆ ಅದೊಂದು ಅಗೌರವದ ಸಂಗತಿಯಲ್ಲವೆ?
ವಿಮರ್ಶೆಯಿಂದ ಈ ಕೆಲಸ ಸಾಧ್ಯವಿದೆ. ಕಲಾವಿದರೂ, ನಮ್ಮ ಕಲಾ
ಮೇಳಗಳ ಮಾಲೀಕರೂ ಈ ಕುರಿತು ಮನಸ್ಸು ಮಾಡಬೇಕು.
ಶೃಂಗಾರ - ಹೊನ್ನಾವರ
19782