೨೦ | ಜಾಗರ
ಉತ್ತರಾದಿ, ದಕ್ಷಿಣಾದಿ ಶೈಲಿಗಳೂ ಹಂತ ಹಂತದ ವಿಕಾಸದಿಂದ ಬೆಳೆದವುಗಳು. ಮೇಲಾಗಿ ಆರಂಭದಲ್ಲೇ ಇದಕ್ಕೆ ಶಾಸ್ತ್ರವಿತ್ತೇ? ಶಾಸ್ತ್ರವಿಲ್ಲದ ಮಾತ್ರಕ್ಕೆ ಒಂದು ಜೀವಂತ ಶೈಲಿಯನ್ನು "ಅದಿಲ್ಲವೇ ಇಲ್ಲ” ಅಂತ ತಿರಸ್ಕರಿಸಬಹುದೆ?
ಇದಕ್ಕಿಂತ ಮಹತ್ವದ ಪ್ರಶ್ನೆ ಅಂದರೆ ಶೈಲಿ ಮತ್ತು ಶಾಸ್ತ್ರಗಳ ಸಂಬಂಧದ್ದು. ಶಾಸ್ತ್ರವು ಲಕ್ಷಣವನ್ನು ಹೇಳೀತಲ್ಲದೆ, ಶೈಲಿಯನ್ನು ಪೂರ್ಣವಾಗಿ ತಿಳಿಸಲಾರದು. ಶೈಲಿ (Style-School) ಎಂಬುದು, ಕಲೆಯಲ್ಲಿ ಅನುಭವ ವೇದ್ಯ. ಗಾನದ ಶೈಲಿ ಕೇಳುವ ಅನುಭವದಿಂದಲೇ ತಿಳಿಯಬೇಕು.
ಒಂದು ಉದಾಹರಣೆ : ದಕ್ಷಿಣಾದಿ ಸ೦ಗೀತದ ಮೋಹನ ರಾಗಕ್ಕೆ ಸ, ರಿ, ಗ, ಪ, ದ, ಸ ಸ ದ ಪ ಗ ರಿ, ಸ - ಎಂಬುದು ಆರೋಹಣ ಅವರೋಹಣ. ಇದೇ ಹಿಂದುಸ್ಥಾನಿಯ ಭೂಪ ರಾಗದ ಆರೋಹ, ಅವರೋಹ. ಶಾಸ್ತ್ರ ಒಂದೇ, ಆದರೆ ಈ ರಾಗವನ್ನು ಹಾಡಲು ತೊಡಗಿದಾಗಲೇ ಇದು ದಕ್ಷಿಣಾದಿ ಇದು ಹಿಂದುಸ್ಥಾನಿ ಎಂದು ಹೇಳಲು ಬರುತ್ತದೆ. ಹಾಗಾದರೆ ಯಾವುದು ಶಾಸ್ತ್ರಕ್ಕೆ ಸರಿ, ಯಾವುದು ಅಲ್ಲ? ಎರಡೂ ಸರಿಯೇ. ಅವು ಒಂದೇ ರಾಗದ ಭಿನ್ನ ಶೈಲಿಗಳು ಅಷ್ಟೆ. ಅದೇ ಮೋಹನರಾಗ ಯಕ್ಷಗಾನ ಕ್ರಮದಿಂದ ಹಾಡಿದಾಗ ಮೂರನೇ ರೀತಿ ಕೇಳುತ್ತದೆ.
ಗಾನದ ಶೈಲಿ ಇರುವುದು ಶಾಸ್ತ್ರದಲ್ಲಲ್ಲ. ಪರಂಪರೆಯಿ೦ದ ಬೆಳೆದ ಪದ್ಧತಿಯಲ್ಲಿ. ಶೈಲಿಯ ವ್ಯತ್ಯಾಸ ಕಾಣುವುದು ಹೇಗೆ? ಅದು ಸ್ವರದ ಸಂಚಾರ ವಿನ್ಯಾಸದಲ್ಲಿ. ಸ್ವರದಿಂದ ಸ್ವರಕ್ಕೆ ಹೋಗುವ ರೀತಿ, ಗಮಕದ ರೀತಿ, ಎತ್ತುಗಡೆ ಇತ್ಯಾದಿಗಳಿಂದ. ಹಾಗಾಗಿ ಶಾಸ್ತ್ರವಾದದಿಂದ ಯಕ್ಷಗಾನ ಶೈಲಿಯನ್ನು ನಿರಾಕರಿಸಬಾರದು.
ಅಷ್ಟೇ ಏಕೆ? ಯಕ್ಷಗಾನದಲ್ಲೇ ಬಡಗು ತೆಂಕು ಎಂಬ ಎರಡು ಶೈಲಿಗಳಿವೆ. (ಗಾಯನವನ್ನು ಗಮನಿಸಿ) ಅವೆರಡೂ ಭಿನ್ನ ಭಿನ್ನ ಎಂದು ನಾವು ಗುರುತಿಸುವುದು ಶಾಸ್ತ್ರದ ಆಧಾರದಿಂದಲೋ? ಕಿವಿಯ ಅನುಭವದಿಂದಲೇ? ಅವೆರಡೂ ಭಿನ್ನವಾಗಿವೆ ನಿಜ. ಆದರೆ, ಅವೆರಡೂ ಒಂದೇ ಆಗಿಯೂ ಇವೆ. ತೆಂಕು - ಬಡಗಿನ ಭಾಗವತಿಕೆಯಲ್ಲಿ ಒಂದೇ ಶೈಲಿಯ ಲಕ್ಷಣಗಳು ಕಾಣುತ್ತವೆ. ಅವು ಒಂದೇ ಶೈಲಿಯ ಪ್ರಭೇದಗಳು ಅಷ್ಟೆ. ಇದೂ ಸಹ ಯಕ್ಷಗಾನದ ಶೈಲಿಯ ಅಸ್ತಿತ್ವಕ್ಕೆ ಪುಷ್ಟಿ ನೀಡುತ್ತದೆ.
ನೃತ್ಯವೂ ಅಷ್ಟೆ. ಭರತನಾಟ್ಯವೊಂದೇ ನಾಟ್ಯವಲ್ಲ. ಕೂಚಿಪುಡಿ ಕಥಕಳಿ ಇಲ್ಲವೆ? ಹಾಗೇ ಯಕ್ಷಗಾನದ ನೃತ್ಯ. ಮನುಷ್ಯನ ಕೈಕಾಲು ಮೈಗಳ ಚಲನೆಯ ವ್ಯವಸ್ಥೆಗೆ, ಲಯದ ವೈವಿಧ್ಯಕ್ಕೆ ಸಾವಿರ ಬಗೆಯ ಸಾಧ್ಯತೆ ಇಲ್ಲವೆ? ಹಾಗಾಗಿ,