ನಮ್ಮ ನಾಟ್ಯಶಾಸ್ತ್ರದ ಪರಂಪರೆಯ ಪರಿಭಾಷೆಯಲ್ಲಿ ಅಭಿನಯ ಎಂದರೆ-
ಆಂಗಿಕ, ಆಹಾರ, ವಾಚಿಕ, ಸಾತ್ವಿಕ. ಈ ನಾಲ್ಕು ಸಹ ಸೇರಿ ಬರುತ್ತವೆ. ಅಂದರೆ,
ಮೈಯ ಚಲನೆ, ವೇಷಭೂಷಣ, ಮಾತು ಮತ್ತು ನಡುಕ, ಕಣ್ಣೀರು ಮೊದಲಾದ
ಪರಿಣಾಮಗಳು, ಇವೆಲ್ಲವೂ ಅಭಿನಯವೇ. ಆದರೆ ಇಂದು ನಾವು ಬಳಸುವ ಅರ್ಥ
ದಲ್ಲಿ ಅಭಿನಯವೆಂಬುದು ಸ್ಕೂಲವಾಗಿ, acting ಎಂಬ ಪದಕ್ಕೆ ಸಮಾನಾರ್ಥಕವಾಗಿ
ಇದೆ. ಕಣ್ಣು, ಮುಖಗಳಲ್ಲಿ ಆಗುವ ಭಾವಪ್ರಕಟನೆ ಮತ್ತು ಅಂಗಗಳ ಚಲನೆ,
ಮುದ್ರೆಗಳು, ನಿಲುವು, ಭಂಗಿ - ಇವುಗಳಿಂದ ಆಗುವ ಅಭಿವ್ಯಕ್ತಿ - ಇವು ಸೇರಿ,
ನಾವು ಹೇಳುವ ಅಭಿನಯ ನಿಷ್ಪನ್ನವಾಗುತ್ತದೆ.
ಯಕ್ಷಗಾನದ ದೃಷ್ಟಿಯಿಂದ ಹೇಳುವುದಾದರೆ, ನಾಟಕದಲ್ಲಿನ ಅಭಿನಯ
ಮತ್ತು ನೃತ್ಯದಲ್ಲಿನ ಅಭಿನಯ ಇವೆರಡನ್ನೂ ಅದು ಒಳಗೊಳ್ಳುತ್ತದೆ. ಯಕ್ಷಗಾ
ನದಲ್ಲಿ ಕುಣಿತವೂ ಮಾತ್ರ ಇರುವುದರಿಂದ ನೃತ್ಯ, ನಾಟಕಗಳ ಅಭಿನಯ ಮತ್ತು
ಯಕ್ಷಗಾನದ ಅಭಿನಯ ಒಂದೇ ಎಂದು ನನ್ನ ಮಾತಿನ ಅರ್ಥವಲ್ಲ. ಅವೆರಡೂ ಜಾತಿ
ಗಳು ಇಲ್ಲಿ ಸೇರಿವೆ ಎಂದಷ್ಟೆ ಅರ್ಥ.
ಯಕ್ಷಗಾನದಲ್ಲಿ ಅಭಿನಯ ಎರಡು ರೀತಿಯಾಗಿ ಬರುತ್ತದೆ. ಒಂದು
ಪದ್ಯದ ಜತೆ ಮಾಡುವ ಅಭಿನಯ, ಇನ್ನೊಂದು ಮಾತಿನ ಜತೆ ಬರುವಂತಹದ್ದು.
ಯಕ್ಷಗಾನದ ಅಭಿನಯ, ನಾಟಕ ಮತ್ತು ನೃತ್ಯಗಳ ಅಭಿನಯಕ್ಕಿಂತ, ಭಿನ್ನವಾದದ್ದು,
ಅದು ಆ ಪ್ರಮಾಣದಲ್ಲಿ ದೊಡ್ಡದು ಮತ್ತು ತೀವ್ರವಾದದ್ದು.
ಅದರಲ್ಲಿ ಜಾನ
ಪದ ಸತ್ವ ಅಧಿಕ ಪ್ರಮಾಣದಲ್ಲಿ ಇರುವುದು, ಆಟವು ಬಯಲುರಂಗಭೂಮಿಯಲ್ಲಿ
ಬೆಳೆದು ಬಂದಿರುವುದೂ - ಇದಕ್ಕೆ ಕಾರಣಗಳೆನ್ನಬಹುದು. ಅಲ್ಲದೆ, ಯಕ್ಷಗಾನದ
ಅಭಿನಯ, ವಿಶಿಷ್ಟವಾದ, ಪ್ರಬಲವಾದ, ಸೌಂದಯ್ಯ ಸಮೃದ್ದವಾದ ಒಂದು ಬಗೆಯ
ಹಿಮ್ಮೇಳ ಮತ್ತು ವೇಷಭೂಷಣಗಳ ಮಧ್ಯೆ ಮೂಡಿಬರುವಂತಹದ್ದು. ಯಕ್ಷಗಾ
ನದ ಚೆಂಡೆ, ಅದರ ಹಾಡುಗಾರಿಕೆ, ಆದರ ವೇಷಪರಿಕರಗಳು - ಎಲ್ಲ ಹೇಗೆ -