ನಾಲ್ಕು ವೇಷಗಳು
ಪರಂಪರೆಯ ಸರಿಯಾದ ಅಧ್ಯಯನದಿಂದ, ಪರಿಶೀಲನದಿಂದ ಮೂಡಿ
ಬರುವ ಸುಧಾರಣೆ ಯಕ್ಷಗಾನ ರಂಗಕ್ಕೆ ಅವಶ್ಯವಾಗಿ ಬೇಕು. ಸಾಂ ಪ್ರದಾ ಯಿ ಕ
ಕಲೆಯ ಬಂಧದ ಒಳಗೆ ಹೊಸ ಸೃಷ್ಟಿಗೂ, ಪರಿಷ್ಕಾರಕ್ಕೂ ಸಾಕಷ್ಟು ಅವಕಾಶ
ಗಳಿವೆ. ಅಸಾಮಾನ್ಯ ಕಲ್ಪನಾ ಸಮೃದ್ಧಿಯೂ, ಸೌಂದರ್ಯವೂ ಇರುವ ಯಕ್ಷಗಾನದ
ಶೈಲಿಯನ್ನು ಇನ್ನಷ್ಟು ಬೆಳೆಸಲು ಸಾಧ್ಯವಿದೆ. ಈ ದೃಷ್ಟಿಯಿಂದ ಯಕ್ಷಗಾನದಲ್ಲಿ
ಹೊಸ ವೇಷ ವಿಧಾನಗಳ ರಚನೆಯೂ ಹಳೆ ವೇಷಗಳ ಪುನಾರಚನೆಯೂ ಆಗ
ಬೇಕಾಗಿದೆ. ಅಂತಹ ಕೆಲವು ಸಂದರ್ಭಗಳನ್ನು ಇಲ್ಲಿ ವಿವೇಚಿಸೋಣ.
ಬಡಗು ತಿಟ್ಟಿನ ಬಣ್ಣದ ವೇಷ :
ಚುಟ್ಟಿಗಳ ವಿನ್ಯಾಸ, ರೇಖಾ ವಿನ್ಯಾಸ, ಕಿರೀಟ, ಪಾತ್ರಾನುಗುಣವಾದ
ಬಳಕೆ - ಇವುಗಳಲ್ಲೆಲ್ಲ ಬಣ್ಣದ ವೇಷಗಳ ಒಟ್ಟು ಸ್ವರೂಪ ತೆಂಕು ಬಡಗು
ಉ. ಕನ್ನಡ ತಿಟ್ಟುಗಳಲ್ಲಿ ಹೆಚ್ಚು ಕಡಿಮೆ ಒಂದೇ ಬಗೆಯವು. ಆದರೆ ಬಣ್ಣದ
ವೇಷದ ವಿಭಾಗದಲ್ಲಿ ತೆಂಕುತಿಟ್ಟು ಕಂಡ ಬೆಳವಣಿಗೆಯನ್ನು ಬಡಗಣ ತಿಟ್ಟುಗಳು
ಕಂಡಿಲ್ಲ. ಬಡಗು ತಿಟ್ಟುಗಳು ಪರಂಪರೆಯನ್ನು ಎಲ್ಲ ಅಂಗಗಳಲ್ಲಿ ಹೆಚ್ಚು
ಪ್ರಮಾಣದಲ್ಲಿ ಉಳಿಸಿಕೊಂಡಿದ್ದರೂ, ಬಣ್ಣದ ವೇಷದ ವಿಭಾಗದಲ್ಲಿ ಹಾಗಿಲ್ಲ
ದಿರುವುದು ಗಮನಾರ್ಹ. (ತಿಟ್ಟುಗಳ ಹೋಲಿಕೆ, ಇಂತಹ ಸಂದರ್ಭಗಳಲ್ಲಿ ತುಂಬ
ಉಪಯುಕ್ತವಾಗಬಲ್ಲುದು) ಬಡಗಣ ಪ್ರಾಂತದಲ್ಲಿ ಬಣ್ಣದ ವೇಷಗಳೇ ಮಾಯ
ವಾಗುತ್ತ ಬಂದಿವೆ.
ಬಡಗು ತಿಟ್ಟುಗಳ ಬಣ್ಣದ ವೇಷದಲ್ಲಿ ಅಂಗ ಸಾಮ್ಯದ ಕೊರತೆ ಎದ್ದು
ಕಾಣುತ್ತದೆ. ತಲೆಯ ಕಿರೀಟ, ಮುಖದ ಬರವಣಿಗೆಯ ಪ್ರಮಾಣಕ್ಕೆ ಎದೆಯ
ಗಾತ್ರ ಸಣ್ಣದು. ಸೊಂಟದ ಕೆಳಗಂತೂ ಈ ವೇಷ ತೀರ ಬಡಕಲು ಎನಿಸುತ್ತದೆ.
ಆಕೃತಿ ಬದ್ಧತೆಯನ್ನು ಮನಸ್ಸಿನಲ್ಲಿ ನೋಡಿದರೆ ತೀರ ಒಡೆದು ಕಾಣುವ ಭಿನ್ನ
ಪುಟ:ಜಾಗರ.pdf/೮೮
ಈ ಪುಟವನ್ನು ಪ್ರಕಟಿಸಲಾಗಿದೆ