ಈ ಪುಟವನ್ನು ಪ್ರಕಟಿಸಲಾಗಿದೆ

ಬೇಬಿ

೧೧

ಅಂಗಳಕ್ಕೆ ಓಡಿ ಹೋಗುತ್ತಾನೆ. ಬಟ್ಟೆಯನ್ನು ಕೊಳೆ ಮಾಡಿಕೊಳ್ಳುತ್ತಾನೆ. ಹೆದರಿಸಿದರೆ ನಗುತ್ತಾ ಮೈಮೇಲೆ ಹತ್ತುತ್ತಾನೆ. ಬಿಳಿ ಬಟ್ಟೆಯವರನ್ನು ಕಂಡರೆ, ನೀನೆಂತ ಅವರ ಹತ್ತಿರ ಓಡುತ್ತಾನೆ. ನಾನೆರಡು ಡೆಹಿಲಿಯಾ ಗಿಡಗಳನ್ನು ಬೆಳೆಸಿಕೊಂಡಿದ್ದೆನೆ; ಅವುಗಳನ್ನು ಹೋಗಿ ಕೀಳುತ್ತಾನೆ.

ಮೇಜಿನ ಮೇಲೆ ಒಂದು ಪಾತ್ರೆಯಲ್ಲಿ ಹೂವಿಟ್ಟಿದ್ದೆ. ಮೇಜಿನ ಬಟ್ಟೆಯನ್ನು ಬೇಬಿ ಎಳೆದ. ಹೂವಿನ ಸಮೇತ ಪಾತ್ರ ಕೆಳಗೆ ಬಿತ್ತು. ನೆಲವೆಲ್ಲಾ ಗಾಜಿನ ಚೂರು, ಅವುಗಳ ಮಧ್ಯೆ ಅಲ್ಲೊಂದು ಇಲ್ಲೊಂದು ಹೂವು, ಬಿದ್ದ ಹೂಗಳನ್ನು ತೆಗೆದು ತಿನ್ನಲು ಸುರುಮಾಡಿದ. ಆಫೀಸಿಗೆ ಹೋಗಿ ಮೇಜಿನಡಿಯಲ್ಲಿ ಕೂತುಕೊಳ್ಳುತ್ತಾನೆ; ಕೆಳಗೇನಾದರೂ ಇದ್ದರೆ ಅದನ್ನು ಹರಿದುಹಾಕುತ್ತಾನೆ; ಸೇಫಿನ ಬಾಗಿಲನ್ನು ಹಿಡಿದು ತೆಗೆಯಲು ಪ್ರಯತ್ನಿಸುತ್ತಾನೆ. ಸೀತಾರಾಮನ ಪಂಚೆಯನ್ನು ಹಿಂದುಗಡೆಯಿಂದ ಹೋಗಿ ಎಳೆಯುತ್ತಾನೆ. ನನಗೆ ಹೇಳದೆಯೆ ಮೀನಾಕ್ಷಿಯ ಜೊತೆಯಲ್ಲಿ ಅವಳ ಮನೆಗೆ ಹೋಗಿಬಿಡುತ್ತಾನೆ.

ಮೀಯಿಸುವಾಗ ಎದ್ದು ಕೂತುಕೊಂಡು ಚೊಂಬನ್ನು ಕಿತ್ತು ಕೊಳ್ಳುತ್ತಾನೆ. ಸಾಬೂನನ್ನು ಬಾಯಲ್ಲಿಟ್ಟುಕೊಳ್ಳುತ್ತಾನೆ. ಮೈಯನ್ನು ಉಜ್ಜಲು ಬಿಡುವದಿಲ್ಲ; ಬಲಾತ್ಕಾರ