ಈ ಪುಟವನ್ನು ಪ್ರಕಟಿಸಲಾಗಿದೆ
ಸಾಂಪ್ರದಾಯಿಕ ಕಲೆ: ಪ್ರಸ್ತುತತೆಯ ಪ್ರಶ್ನೆ

ಕಾಣುತ್ತೇವೆ, (ಭಕ್ತಿಯ ಆಶಯಗಳಿಗೆ ಒಳಗಾಗಿ ಮೂಲತಃ ಲೌಕಿಕ ಕಾವ್ಯದ ವಸ್ತು, ಎಷ್ಟು ಸರಳ, ಭಾವುಕವಾಗಿ, ಮಾನವಾನುಭವದಿಂದ ದೂರವಾಗುತ್ತದೆ ಎಂಬು ದಕ್ಕೆ ಕುಮಾರವ್ಯಾಸ ಭಾರತ, ತೊರವೆ ರಾಮಾಯಣಗಳು ದೃಷ್ಟಾಂತಗಳು) ಇಂತಹವುಗಳನ್ನು ಭಕ್ತಿಪ್ರಾಧಾನ್ಯತೆಯಿಂದ ಬಿಡಿಸಿ, ಲೌಕಿಕಕ್ಕೆ ತರುವ ಕೆಲಸ ಇಂದಿನ ಕಲಾವಿದರ -ಅಂದರೆ ಪ್ರಸಂಗ ಲೇಖಕ, ನಟ, ಭಾಗವತ -ಎಲ್ಲರ ಮೇಲಿದೆ.

ಇಂತಹ ಒಂದು ಕೆಲಸವನ್ನು ಬೇರೆ ಬೇರೆ ಮಟ್ಟಗಳಲ್ಲಿ ಸಾಧಿಸಬಹುದು. ಅಂದರೆ ಮೂಲ ನಾಟಕ (ಪದ್ಯಗಳ 'ಪ್ರಸಂಗ'ವೆಂಬ ಹಾಡುಗಬ್ಬ) ರಚನೆ, ಅದರ ರಂಗದ ಅಳವಡಿಕೆ, ನೃತ್ಯ, ಅರ್ಥಗಾರಿಕೆ, ತಂತ್ರಗಳಲ್ಲಿ ಆಧುನಿಕ ರಂಗ ಪರಿಜ್ಞಾನದ ಅರ್ಥಪೂರ್ಣವಾದ ಬಳಕೆ - ಹೀಗೆ ವಿಭಿನ್ನ ಸ್ತರಗಳಲ್ಲಿ ಈ ಕಾರ ಆಗಬೇಕಾದುದು. ಈಗ ಬಳಕೆಯಲ್ಲಿರುವ ಯಕ್ಷಗಾನದ ನೃತ್ಯ, ತಂತ್ರ, ವೇಷಗಳನ್ನು ಅದೇ ಶೈಲಿಯಲ್ಲಿ ವಿಸ್ತರಿಸಿ ಬಳಸಿದರೆ ಅದು ಯಕ್ಷಗಾನದ ಮೂಲಧರ್ಮವಾದ ಶೈಲಿಗೆ ಪೋಷಕವೇ ಹೊರತು ಬಾಧಕವಲ್ಲ. ಹೊಸ ಹೆಜ್ಜೆ, ಗತ್ತುಗಳ ನಿರ್ಮಾಣ, ಚಲನೆಗಳ ಸೇರ್ಪಡೆ, ರಂಗದ ಗಾತ್ರ ವಿಸ್ತಾರ, ಸಾಂಕೇತಿಕ ವಿಧಾನಗಳ ಬಳಕೆಗಳಿಂದ ಯಕ್ಷಗಾನದ ರೂಪಕ್ಕೆ, ನಾವು ಬಯಸುವ ಆಶಯದ ನಾವೀನ್ಯವನ್ನು ನೀಡಲು ಸಾಧ್ಯವಿದೆ. ಇದನ್ನು ಕೆಲವು ರಂಗನಿರ್ದೇಶಕರು ಮಾಡಿತೋರಿಸಿದ್ದಾರೆ. (ಡಾ| ಶಿವರಾಮ ಕಾರಂತ, ಉದ್ಯಾವರ ಮಾಧವಾಚಾರ - ಇವರ ಪ್ರಯೋಗ ಗಳು.) ವ್ಯವಸಾಯಿ ಯಕ್ಷಗಾನ ಮೇಳಗಳು ಕೂಡ ಒಂದು ಪ್ರಮಾಣದಲ್ಲಿ ಈ ಯತ್ನ ನಡೆಸಿವೆ (ಉದಾ, ಸಾಲಿಗ್ರಾಮ, ಇಡಗುಂಜಿ ಮೇಳಗಳ ಕೆಲವು ಪ್ರದರ್ಶನ ಗಳು.) ಇದು ಮುಖ್ಯವಾಗಿ ತಾಂತ್ರಿಕವಾದ ಪ್ರಯತ್ನ. ಇಲ್ಲಿ ಆಧುನಿಕ ವಿಮರ್ಶೆ, ಆಧುನಿಕ ಪರಿಕರ, ನಿರ್ದೇಶನ ವಿದ್ಯೆ, ಇವು ನಮ್ಮೊಂದಿಗಿವೆ. ಅವುಗಳ ಬಳಕೆ, ಯಕ್ಷ ಗಾನದ ಒಂದು ಸಾವಯವ ಭಾಗವಾಗಿ ಅಳವಟ್ಟಾಗ ಮಾತ್ರ, ಶೈಲಿಯನ್ನು ಉಳಿ ಸುವ, ಅದನ್ನು ಉಮ್ಮಿಲನ'ಗೊಳಿಸಿ, ವಸ್ತುನಿರ್ವಹಣೆಯ ಪ್ರಸ್ತುತತೆಗೆ ಸಹಾಯಕ ವಾಗಿಸಬಹುದು.

ಇದಕ್ಕಿಂತ ಹೆಚ್ಚಾಗಿ ವಸ್ತುವಿನ, ಅಂದರೆ ಕಥಾನಕದ ಆಯ್ಕೆ ಮತ್ತು ಅದರ ಬಳಕೆಗೆ ಸಂಬಂಧಿಸಿದುದು ಮುಖ್ಯ ವಿಚಾರ. ಒಂದು ಪೌರಾಣಿಕ, ಜಾನಪದ ಅಥವಾ ಕಲ್ಪಿತ ಕಥಾನಕವನ್ನು ತೆಗೆದುಕೊಂಡು, ರಚನಾಕಾಲದಿಂದಲೇ ಪ್ರಸ್ತುತತೆ ಯನ್ನು ಲಕ್ಷಿಸಿ, ಅದನ್ನು ಬಳಸಿ, ಬೆಳೆಸಿ ರಂಗಕ್ಕೆ ತರುವುದು ಒಂದು ನೆಲೆಯಾದರೆ, ಈಗಾಗಲೇ ಇರುವ ಕೃತಿಯನ್ನು ನಮ್ಮ ದೃಷ್ಟಿಗೆ ತಕ್ಕಂತೆ ಸಂಯೋಜಿಸಿ ಅಳವಡಿ