ಈ ಪುಟವನ್ನು ಪ್ರಕಟಿಸಲಾಗಿದೆ
ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿಗಳು
ವಿಧಾನಸೌಧ
ಬೆಂಗಳೂರು ೫೬೦ ೦೦೧
ಕರ್ನಾಟಕ ಸರ್ಕಾರ


ಸಿಎಂ/ಪಿಎಸ್/೨೬/೧೧
ಶುಭ ಸಂದೇಶ

ವಿಶ್ವ ಕನ್ನಡ ಸಮ್ಮೇಳನದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕನ್ನಡ ನಾಡು ಏಕೀಕರಣಗೊಂಡು ೫೫ನೇ ವರ್ಷಕ್ಕೆ ಹೆಜ್ಜೆಯನ್ನಿಟ್ಟಿದೆ. ಈ ಸಂದರ್ಭವನ್ನು ರಚನಾತ್ಮಕವಾಗಿ ದಾಖಲಿಸಿ ಸ್ಮರಣೀಯಗೊಳಿಸಬೇಕೆಂಬುದು ಸರ್ಕಾರದ ಮಹದಾಶಯ. ಅದಕ್ಕಾಗಿ ಬೆಳಗಾವಿಯಲ್ಲಿ "ವಿಶ್ವ ಕನ್ನಡ ಸಮ್ಮೇಳನ” ವನ್ನು ಇದೇ ಮಾರ್ಚ್ ತಿಂಗಳಿನಲ್ಲಿ ಆಯೋಜಿಸಲಾಗಿದೆ. ಇದನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವುದು ಕರ್ನಾಟಕ ಸರ್ಕಾರದ ಆಶಯವಾಗಿದೆ. ಇದರ ಅಂಗವಾಗಿ ನಾಡಿನ ವಿವಿಧ ಕ್ಷೇತ್ರಗಳಲ್ಲಾಗಿರುವ ಪ್ರಗತಿಯ ಆತ್ಮಾವಲೋಕನದ ಜೊತೆಗೆ ಕನ್ನಡ ಸಾಹಿತ್ಯದ ಸೃಜನಶೀಲ ಮತ್ತು ಸೃಜನೇತರ ಪ್ರಕಾರಗಳ ೧೦೦ ಕೃತಿಗಳನ್ನು ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ ಪ್ರಕಟಿಸಲಾಗುತ್ತಿದೆ. ಕನ್ನಡದ ಖ್ಯಾತ ಲೇಖಕರ ಮಹತ್ವದ ಕೃತಿಗಳನ್ನು ಪ್ರಕಟಿಸಿ, ಸುಲಭ ಬೆಲೆಯಲ್ಲಿ ಸಾಹಿತ್ಯಾಸಕ್ತರಿಗೆ ಒದಗಿಸುವ ಹಂಬಲ ನಮ್ಮದು.

ಈ ಸಾಹಿತ್ಯ ಮಾಲಿಕೆಯಲ್ಲಿನ ಕೃತಿರತ್ನಗಳನ್ನು ಕನ್ನಡಿಗರು ಸಹೃದಯತೆಯಿಂದ ಸ್ವಾಗತಿಸುವ ಮೂಲಕ ಇವುಗಳ ಪ್ರಯೋಜನವನ್ನು ಪಡೆದುಕೊಂಡರೆ ಸರ್ಕಾರದ ಈ ಯೋಜನೆ ಸಾರ್ಥಕವಾಗುತ್ತದೆ ಎಂದು ಭಾವಿಸುತ್ತೇನೆ.

(ಬಿ.ಎಸ್. ಯಡಿಯೂರಪ್ಪ)

ದಿನಾಂಕ ೨೪.೦೧.೨೦೧೧