ಈ ಪುಟವನ್ನು ಪ್ರಕಟಿಸಲಾಗಿದೆ

ವರ್ಷ ವರ್ಷವೂ ಆಟದ ಹರಕೆಯನ್ನು ತೀರಿಸಲು ಬಾಕಿ ಉಳಿಸಿಕೊಳ್ಳುವ ಬಯಲಾಟದ ಮೇಳಗಳು ಕೂಡ ವ್ಯಾಪಾರೀದೃಷ್ಟಿಯಿಂದ ಹೊರತಾಗಿ ಉಳಿದಿಲ್ಲ ಎಂಬುದು ಆತಂಕಕಾರಿ. ಅಂಥ ಘಟನೆಗಳ ಪ್ರತ್ಯಕ್ಷದರ್ಶಿಯೊಬ್ಬನ ಸಾಕ್ಷವಾಗಿಯೂ 'ಕೇದಗೆ' ನಿಮ್ಮ ನ್ಯಾಯಾಲಯದಲ್ಲಿ ತೆರೆದುಕೊಳ್ಳುತ್ತದೆ.

'ಕರಾವಳಿಯ ಯಕ್ಷಗಾನ' ಪ್ರಬಂಧದಲ್ಲಿ ಯಕ್ಷಗಾನದ ಮೂಲವನ್ನು ಅರಸುವ ಪ್ರಯತ್ನ ಮಾಡುತ್ತ, ಯಾವುದರಿಂದ ಯಾವುದು? ಬಡಗಿನಿಂದ ತಂಕೇ? ತೆಂಕನಿಂದ ಬಡಗೇ? ಕಥಕಳಿಯಿಂದ ಯಕ್ಷಗಾನವೇ? ಯಕ್ಷಗಾನದಿಂದ ಕಥಕಳಿಯೇ? ಈ ಬಗೆಯ ಕುರುಡು ಅನ್ವೇಷಣೆಯ ದಾರಿ ಹಿಡಿಯದೆ ಜೋಶಿ ಅವರು ಹೆಚ್ಚು ಅರ್ಥಪೂರ್ಣ ವಿವೇಚನೆಗೆ ಹೋಗಿದ್ದಾರೆ. ಆದಿದ್ರಾವಿಡಭಾಷೆ ಯೊಂದು ತುಳು, ತಮಿಳು, ಕನ್ನಡ, ತೆಲುಗು, ಮಲಯಾಳ ಹೀಗೆ ಪ್ರತ್ಯೇಕ ಭಾಷೆಗಳಾಗಿ ವಿಭಜನಗೊಳ್ಳುವುದಕ್ಕೆ ಒಂದು ಅಥವಾ ಹಲವು ಐತಿಹಾಸಿಕ ಸಂದರ್ಭ ಇರುದಾದರೆ, ಮೂಲದ್ರಾವಿಡ ರಂಗಕಲೆಯೆಂದು 'ಯಕ್ಷಗಾನದ ಪ್ರಭೇದಗಳು' ಕಥಕಳಿ, ತೆರುಕೂತ್, ತೆಯ್ಯಂ, ಭೂತಕೋಲ, ಕ್ಯಾಂಡಿ (ಸಿಂಹಳ) ನೃತ್ಯಗಳಾಗಿಯೂ ವಿಭಜನ ಹೊಂದುವುದು ಹಾಗೂ ಆ ಬಗೆಯಲ್ಲಿ ಪ್ರತ್ಯೇಕ ಎತ್ತರಗಳಿಗೆ ವಿಕಾಸಗೊಳ್ಳುವುದು ಸಂಭವನೀಯ. ಮೇಲೆ ಹೇಳಿದ ಎಲ್ಲ ರಂಗಪ್ರಕಾರಗಳಲ್ಲೂ ಸೋದರತೆಯನ್ನು ನಿಚ್ಚಳವಾಗಿ ಕಾಣಬಹುದು. ಪ್ರತ್ಯೇಕಗೊಂಡ ಬಳಿಕವೂ ಪರಸ್ಪರ ಪ್ರಭಾವಕ್ಕೊಳಗಾದುದನ್ನೂ ನಾವು ಗುರುತಿಸ ಬಹುದು. ಇವೆಲ್ಲ ಕಲೆಗಳಲ್ಲೂ 'ತೆಂಕು' 'ಬಡಗು' ಶೈಲಿಗಳು ಇರುವುದು ಸಾಮಾನ್ಯ. ಈ ಸಂದರ್ಭದಲ್ಲಿ ಕೇರಳದ 'ಪಾಡಯಣಿ' ಎನ್ನುವ ಆರಾಧನಾ ಕಲೆಯನ್ನು ಕೂಡ ನೋಡುವುದು ಬಹಳ ಉಪಯುಕ್ತವಾದೀತು. ಬಹುಶಃ ಪ್ರಾಗ್‍ದ್ರಾವಿಡ ಕಲೆಯ ಪಳೆಯುಳಿಕೆ ಅದಾಗಿರಬೇಕು ಎಂದು ತರ್ಕಿಸಲು ಎಡೆಯಿದೆ.

ಯಕ್ಷಗಾನದ ಪೂರ್ವರೂಪನಿರ್ಣಯದಲ್ಲಿ ಬಹುವಾಗಿ ಉಪಕರಿಸುವ ಇನ್ನೊಂದು ಪುರಾವೆಯನ್ನು ಜೋಶಿ ಅವರ ಲೇಖನಕ್ಕೆ ಪೂರಕವಾಗಿ ಸೇರಿಸಬಹುದು. ಅದು ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಣಸಿಕ್ಕಿರುವ ಪ್ರಾಚೀನ ಯಕ್ಷಗಾನದ ಗೊಂಬೆಗಳು. ಘಟ್ಟದ ಮೇಲಿನ ಗೊಂಬೆಯಾಟಕ್ಕೂ ಅಲ್ಲಿನ ಬಯಲಾಟಕ್ಕೂ ವೇಷಭೂಷಣದಲ್ಲಿ ಸಾಮ್ಯವಿದೆ. ಉಪ್ಪಿನಕುದುರು ಕೊಗ್ಗ ಕಾಮತರ ಗೊಂಬೆ ಯಾಟಕ್ಕೂ ಬಡಗುತಿಟ್ಟಿನ ಬಯಲಾಟಕ್ಕೂ ರೂಪದಲ್ಲಿ ಹೋಲಿಕೆ ಇದೆ. ಇವೆರಡು ನಿಜವಾದರೆ ಕಾರ್ಕಳದ ಗೊಂಬೆಗಳಿಗೂ ಆ ಕಾಲದ ಬಯಲಾಟಕ್ಕೂ ಸಾರೂಪ್ಯ ಇರಲೇಬೇಕು. ಅದು ಸತ್ಯವಾದರೆ ಶತಮಾನಗಳ ಹಿಂದೆ ದಕ್ಷಿಣ




ix