ಈ ಪುಟವನ್ನು ಪ್ರಕಟಿಸಲಾಗಿದೆ

2/ ಕೇದಗೆ

# ಶಾರ್ಙ್ಞದೇವನ (12 ನೇ ಶತಮಾನ) 'ಸಂಗೀತರತ್ನಾಕರ'ದಲ್ಲಿ ಬರುವ 'ಚೌಲೀರ್ಜಕ್ಕೇತಿ ಕೀರ್ತಿತಾ' ಎಂಬ ಉಕ್ತಿಯನ್ನು ಅನುಸರಿಸಿ ಇಲ್ಲಿ ಯಕ್ಷಗಾನವೆಂಬ ಗಾನಶೈಲಿಯು ಉಕ್ತವಾಗಿದೆ ಎಂದು ಡಾ| ಶಿವರಾಮ ಕಾರಂತರ2 ಹೇಳಿಕೆ.

# ಅಗ್ಗಳನ 'ಚಂದ್ರಪ್ರಭ ಪ್ರರಾಣ' (12 ನೇ ಶತಮಾನ)ದಲ್ಲಿ ಬರುವ 'ತಾಳಮನಿತ್ತು.... ಲೀಲೆಯಿನೆಕ್ಕಲಗಾಣನೂರ್ಪನಂ ಕೇಳುತ್ತಮಿರ್ದಂ' ಎಂಬುದನ್ನಾಧರಿಸಿ ದಿ। ಮುಳಿಯ ತಿಮ್ಮಪ್ಪಯ್8ಯ ಮತ್ತು ಕಾರಂತರು4 ಯಕ್ಷಗಾನವು ಇಲ್ಲಿ ಸೂಚಿತವೆಂದು ಹೇಳಿದ್ದಾರೆ. ಆದರೆ ಶ್ರೀ ಚಿಟಗುಪ್ಪಿ, ಭೀಮರಾವ್‌ (ಯಕ್ಷಗಾನ ಚರಿತ್ರ5 ಮುಂಬಯಿ, 1970) ಶ್ರೀ ಕುಕ್ಕಿಲ ಕೃಷ್ಣ ಭಟ್ (ರಾಷ್ಟ್ರಮತ 1960—61)8 ಇವರು ಈ ಪದ್ಮದಲ್ಲಿರುವುದು ಏಕಲ, ಯಮಲ, ವೃಂದ ಎಂಬ ಕ್ರಮಗಳ ಶಾಸ್ತ್ರೀಯ ಗಾಯನದ ಪೈಕಿ 'ಏಕಲ' ಗಾಯನವೆಂದೂ ಇದಕ್ಕೂ ಯಕ್ಷಗಾನಕ್ಕೂ ಸಂಬಂಧವಿಲ್ಲವೆಂದೂ ಸಾಧರವಾಗಿ ನಿರೂಪಿಸಿದ್ದಾರೆ.

# ಯಕ್ಷಗಾನವು ಸಮಗ್ರ ವಕ್ಷಿಣ ಭಾರತದ ಸಾಂಪ್ರದಾಯಿಕ ರಂಗಭೂಮಿಯ ಹೆಸರಂದೂ 'ಯಕ್ಷ' ಎಂಬುದಕ್ಕೂ 'ಜಕ್ಕ' ಆಂಧ್ರದ ಜಕ್ಕುಲು ಸಿಂಹಳದ ಯಕ್ಕ ಅಥವಾ ಯಕ ಎಂಬ ಭೂತಾರಾಧನೆ, ಕೇರಳದ ಚಾಕ್ಯಾರ್‌ ಇವಕ್ಕೂ ಮೂಲ ಒಂದೇ ಎಂದೂ ಶ್ರೀ ಅಮೃತ ಸೊಮೇಶ್ವರರ ಪ್ರತಿಪಾದನೆ.

# ಡಾ! ವಿ. ರಾಘವನ್‌ ಅವರು8 (ತ್ರಿವೇಣಿ ಮದರಾಸು, 1934) ಮತ್ತು ಕುಕ್ಕಿಲ ಕೃಷ್ಣ ಭಟ್ಟರು9 (ಬಾಸಿಗ 1968) ಭರತನ ನಾಟ್ಯಶಾಸ್ತ್ರದಲ್ಲಿ ಉಕ್ತವಾದ ಕೆಲ ಸಂಗತಿಗಳಿಗೂ ಯಕ್ಷಗಾನಕ್ಕೂ ಸಾಮ್ಯವನ್ನು ಗುರುತಿಸಿದ್ದಾರೆ. 'ಕ್ರೀಡನೀಯಕ' ಎಂಬುದು ಅದರಲ್ಲಿ ಬರುವ ಬಾಹುಪೂರ (ಬಾಪುರಿ) ಕರ್ಣಕೀಲಕ, ಚತೂರಸ (ಚಿತ್ರಾಸು) ಚಲನ (ಚಲ್ಲಣ) ವರ್ತನಿಕಾ (ಒತ್ತೆನಾಕು) ಮೌಲಿ ಮುಂಂತಾದ ಶಬ್ದಗಳ ಆಧಾರದಲ್ಲಿ ಬಯಲಾಟವೇ ಹೌದೆಂದು ಕುಕ್ಕಿಲರ ವಾದ. 'ಉತ್‌ಪ್ರತೀಕರಣ' 'ಭ್ರಮರಿ' ಮುಂತಾದ ಕುಣಿತಗಳು ಯಕ್ಷಗಾನದಲ್ಲಿರುವುದನ್ನೂ ಭರತನಿಂದ ಉಕ್ತವಾದ 'ಆರಭಟೀವೃತ್ತಿ'ಯು ಯಕ್ಷಗಾನದಾಟಕ್ಕೆ ಸರಿಹೊಂದುವುದನ್ನೂ ಅವರು ತೋರಿಸುತ್ತಾರೆ.

# ಕ್ರಿ. ಶ. 13 ನೇ ಶತಮಾನದ ಚೌಂಡರಸನ ಅಭಿನವದಶಕುಮಾರ ಚರಿತ್ರೆಯಲ್ಲಿ ಬರುವ 'ಪ್ರಸಿದ್ದಿಯವತಾರಾಕಾರಮಾನಟ್ಟುವಂ ವಿಹಿತಂ ರಂಗದೊಳಾಡಿ' ಎಂಬುದೂ ಅದೇ ಶತಮಾನದ ಜನ್ನನ ಯಶೋಧರಚರಿತೆಯಲ್ಲಿ ಬರುವ 'ಕೇಳಿಕೆಯ' ಪ್ರಸ್ತಾಪವೂ ಬಯಲಾಟಕ್ಕೇ ಸಂಬಂಧಿಸಿದವೆಂಬುದು ಕುಕ್ಕಿಲರ ಊಹೆ.10 (ರಂಗವೈಖರಿ: ಕರೋಪಾಡಿ, ದ. ಕ 1981)