ಈ ಪುಟವನ್ನು ಪ್ರಕಟಿಸಲಾಗಿದೆ

ಲೇಖಕನ ಮಾತು

ಯಕ್ಷಗಾನರಂಗದ ವಿವಿಧ ಅಂಶಗಳಿಗೆ ಸಂಬಂಧಿಸಿ ನಾನು ಬೇರೆ ಬೇರೆ ಸಂದರ್ಭಗಳಿಗಾಗಿ ಬರೆದ ಲೇಖನಗಳು ಸೇರಿ ಈ ಲೇಖನಸಂಕಲನ ಪ್ರಕಟವಾಗುತ್ತಿದೆ. ಲೇಖನಗಳನ್ನು ಅಷ್ಟಿಷ್ಟು ಪರಿಷ್ಕರಿಸಿದ್ದೇನೆ.

ಈ ಲೇಖನಗಳನ್ನು ವಿವಿಧ ಸಂದರ್ಭಗಳಲ್ಲಿ ಬರೆಯಿಸಿದ ಸಂಸ್ಥೆಗಳಿಗೆ ಮತ್ತು ಪ್ರಕಟನೆಗಳ ಸಂಪಾದಕರಿಗೆ ನಾನು ಆಭಾರಿಯಾಗಿದ್ದೇನೆ. ಕೃತಿಯನ್ನು ಅಭ್ಯಸಿಸಿ ವಿಶ್ಲೇಷಿಸಿ ಮುನ್ನುಡಿಯನ್ನು ಬರೆದು ಸಂಕಲನಕ್ಕೆ ಗೌರವವನ್ನು ತಂದಿತ್ತ ಕಲಾವಿದ, ಪ್ರಸಂಗಕರ್ತ, ವಿಮರ್ಶಕ, ಮಿತ್ರ ಶ್ರೀ ಕೆ. ಎಂ. ರಾಘವ ನಂಬಿಯಾರರಿಗೆ ನಾನು ಋಣಿ.

ಇದಕ್ಕೆ ಅವಶ್ಯವಾದ ಹಲವು ಫೋಟೋಗಳನ್ನು ಒದಗಿಸಿದ CESCA (Centre for Cultural and Social Action. Kankanady. Manglore) ಇದರ ಸಂಚಾಲಕ ಶ್ರೀ ಶ್ರೀಧರ್‌, ಛಾಯಾಗ್ರಾಹಕರಾದ ಯಜ್ಞ ಮತ್ತು ಕೀರ್ತಿ, ಎ. ಈಶ್ವರಯ್ಯ, ಪ್ರೊ| ಕು. ಶಿ. ಹರಿದಾಸ ಭಟ್ಟರು, ಕೆಲವು ಬ್ಲಾಕುಗಳನ್ನು ಒದಗಿಸಿದ ಪೊಳಲಿ ಶಾಸ್ತ್ರಿ ಸ್ಮಾರಕ ಸಮಿತಿ, ಮಂಗಳೂರು, ಬಣ್ಣದ ವೇಷಗಳ ಚುಟ್ಟಿಗಳ ವಿನ್ಯಾಸದ ರೇಖಾಚಿತ್ರಗಳ ಬ್ಲಾಕುಗಳನ್ನು ಒದಗಿಸಿದ ಶ್ರೀ ಮುಳಿಯ ಮಹಾಬಲ ಭಟ್ ಇವರಿಗೆ ನನ್ನ ಕೃತಜ್ಞತೆಗಳು.

ಅಂದವಾದ ಮುಖಚಿತ್ರವನ್ನು ರಚಿಸಿಕೊಟ್ಟ ಕಲಾವಿದರಾದ ಕೆರೆಕೊಡಿ ಮಹಾಬಲ ಮತ್ತು ಎಡ್ಡಿ ಸಿಕ್ವೆರಾ ಇವರಿಗೆ, ಕೆಲವು ಬ್ಲಾಕುಗಳನ್ನು ನಿರ್ಮಿಸಿದ. ರಕ್ಷಾಪುಟವನ್ನು ಸುಂದರವಾಗಿ ಮುದ್ರಿಸಿದ ಶಾರದಾ ಪ್ರೆಸ್ ಮಂಗಳೂರು ಇವರಿಗೆ ನನ್ನ ನೆನಕೆ.

ಈ ಸಂಕಲನದ ಪ್ರಕಟನೆಯಲ್ಲಿ ವಿಶೇಷ ಆಸಕ್ತಿ ವಹಿಸಿ, ವಾಣಿಜೇತರ ಒಲವಿನಿಂದ ಮುದ್ರಣದ ಹೊಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಹಿರಿಯ ಮಿತ್ರರಾದ ಪೆರ್ಲ ಕೃಷ್ಣ ಭಟ್ಟರಿಗೆ ವಿಶೇಷವಾದ ಕೃತಜ್ಞತೆಗಳು ಸಲ್ಲುತ್ತವೆ.

ಬೆಸೆಂಟ್ ಪದವಿಪೂರ್ವ ಕಾಲೇಜು
ಕೊಡಿಯಾಲಬೈಲು

ಮಂಗಳೂರು — 575 003

- ಎಂ. ಪ್ರಭಾಕರ ಜೋಶಿ

iii