ಈ ಪುಟವನ್ನು ಪರಿಶೀಲಿಸಲಾಗಿದೆ

ಪ್ರಸಂಗರಚನೆ : ರಂಗದೃಷ್ಟಿ /37

ಸರ್ವಥಾ ಸಂ | ಗರವು ಬೇಡ ನಿನಗೆ ಸಾರಿದೆ | ಮರಳಿ ಹರಿಪಂಚಾದ -
ರಂಬಪಕೀರ್ತಿ ಬಹುದೆಂದ ||
'ರಾಜಸೂಯಾಧ್ವರ'ದಲ್ಲಿ ಶ್ರೀಕೃಷ್ಣನ ಪದ್ಯ :
ಎಲವೊ ಧರೆಯ ಧರ್ಮಾದಿಗಳ | ಸಲಹಿ ಖಳರ ತಲೆಯಗೊಂಬು |
ದಿಳೆಯ ಶಿಕ್ಷೆರಕ್ಷೆ ನಮಗೆ | ತಿಳಿದುಕೊ ಮಗಧ ||

ಸುಭದ್ರಾಕಲ್ಯಾಣ, ಭೀಷ್ಮಾರ್ಜುನ, ಅಂಗದಸಂಧಾನ ಮೊದಲಾದ ಪ್ರಸಂಗಗಳ ಹೆಚ್ಚಿನ ಪದ್ಯಗಳು ಹೀಗೆ ಎರಡು ಬಗೆಯಲ್ಲಿ ಪರಿಭಾವಿಸಲು ಅನುಕೂಲವಾಗಿವೆ.

ಗೆರೆಸೊಪ್ಪೆ ಶಾಂತಪ್ಪಯ್ಯನ 'ಕರ್ಣಪರ್ವ'ದ ಈ ಪದ್ಯಗಳನ್ನು ನೋಡಿ :
ಏನ ಮಾಡುವುದನ್ನು ದೈವವಿ | ಹೀನನಲ್ಲಾ ನೃಪತಿ ರಣದಭಿ | ಮಾನಿ ದೇವತೆ
ಮುಳಿದಳಿಂದಿಗೆನುತ್ತ ಚಿಂತಿಸಿದ ||

ಎನ್ನ ಕುಲವ ಕೃಷ್ಣನು ಎಚ್ಚರಿಸುತ | ಎನ್ನೊಡೆಯನ ಕೊಂದನು |
ಇನ್ನೆಂತು ಬದುಕುವನೋ | ಕೌರವನಿಗೆ | ಎನ್ನಂಥ ಮಿತ್ರರಾರನ್ನು ||
ಇಲ್ಲಿ ಕರ್ಣನ ಬಾಳಿನ ದುರಂತವೇ, ಅದರ ಹಿನ್ನೆಲೆಯೊಂದಿಗೆ ಸೂಚಿತವಾಗಿದೆ.

ಪದಾಭಿನಯಕ್ಕೆ ಅವಕಾಶವನ್ನೊದಗಿಸುವಂತಹ ಪದಪ್ರಯೋಗ ಇರಬೇಕಾದುದು ಪ್ರಸಂಗಗಳ ಪದ್ಯಗಳಲ್ಲಿರಬೇಕಾದ ಇನ್ನೊಂದು ಗುಣ. ಬರಿಯ ಕತೆಯನ್ನು ಸಾಗಿಸುವ ಪದ್ಯಗಳು, ದೃಶ್ಯಬದಲಾವಣೆಯ ಪದ್ಯಗಳು ಇರುವಲ್ಲಿ ಪದಾಭಿನಯಕ್ಕನುಕೂಲಿಸುವ ಶಬ್ದಗಳು ಇರಬೇಕಿಲ್ಲ. ಹಾಗೆಯೇ ಶೋಕ, ಚಿಂತೆ, ಉಪದೇಶ - ಮುಂತಾದ ಸಂದರ್ಭಗಳಲ್ಲೂ ಹಸ್ತಾಭಿನಯಕ್ಕೆ ಬೇಕಾದ ಶಬ್ದಗಳು ಇದ್ದರೆ ಅನುಕೂಲವಲ್ಲ. ಉತ್ಸಾಹ, ಸಂಭ್ರಮ, ವೀರ, ವಿಭಿನ್ನ ಭಾವಗಳ ಹೊಯ್ದಾಟ ಇಂತಹ ಕಡೆಗಳಲ್ಲಿ ರಚನೆ, ಒತ್ತಾಗಿ, ನಾಜೂಕಾಗಿ ಇರಬೇಕು. ದೃಶ್ಯ ಬದಲಾವಣೆ, ಕಥನಶೈಲಿಯ ಸಂದರ್ಭಗಳಲ್ಲಿ (ಉದಾ : ಇಂತು ಪೇಳಲು ಬಳಿಕ.....ಇಂತು ಜರೆಯಲು ಕೇಳ್ದು... ಇಂತಾ ಪರಿಯೊಳ್ ಜರೆಯ ಕೇಳ್ದು....) ಭಾಮಿನಿಷಟ್ಟದಿ, ಕಂದ - ಇಂತಹ ಘಂದಸ್ಸುಗಳು ಸೂಕ್ತ.

ಆಟದ ರಂಗದಲ್ಲ, ತಾಳಮದ್ದಳೆಯಲ್ಲಿ ಯಶಸ್ವಿಯಾಗಿರುವ, ರಂಗ ಕೃತಿಯ ನೆಲೆಯಲ್ಲಿ ಉತ್ತಮವೆನಿಸಿರುವ ಪ್ರಸಂಗಗಳೂ ಕೂಡ ಕೆಲವೆಡೆ, ನೃತ್ಯ, ಅಭಿನಯ, ಕಥೆಯವೇಗ, ಸನ್ನಿವೇಶನಿರ್ಮಾಣಗಳ ಕಡೆ ಲಕ್ಷ್ಯವಿಲ್ಲದೆ ಬರಿಯ ಕಥನವನ್ನೇ ಮುಖ್ಯವಾಗಿ ಇರಿಸಿ ರಚಿಸಿದಂತೆ ತೋರುತ್ತವೆ. ಇವು ಅಂಶತಃ ರಂಗಕ್ಕೆ ತೀರ ತೊಡಕನ್ನು ತರುವುದನ್ನೂ ಕಾಣುತ್ತೇವೆ.

'ಗಿರಿಜಾಕಲ್ಯಾಣ' ಪ್ರಸಂಗ ಆರಂಭವಾಗುವುದು ಈ ಭಾಮಿನಿಷಟ್ನದಿಯಿಂದ :