ಈ ಪುಟವನ್ನು ಪ್ರಕಟಿಸಲಾಗಿದೆ
ಅರ್ಥಗಾರಿಕೆ : ಸೃಜನಶೀಲದೃಷ್ಟಿ /55

ನಾಟಕಾದಿ ರಂಗಕಲೆಗಳಲ್ಲಿ ಇಲ್ಲದೆ ಅಸೀಮ ಸ್ವಾತಂತ್ರ್ಯವನ್ನು ಕಲಾವಿದನಿಗೆ ನೀಡುತ್ತದೆ. ಜತೆಗೆ ಆ ಸ್ವಾತಂತ್ರ್ಯವನ್ನು ವಿವೇಕದಿಂದ, ಸಂಯಮದಿಂದ ಬಳಸುವ ಹೊಣೆಗಾರಿಕೆಯನ್ನೂ ಹೇರುತ್ತದೆ. ಅರ್ಥಗಾರಿಕೆಯೆಂಬುದು ಹತ್ತಾರು ಜನ ಕಲಾವಿದರು ತಮ್ಮ ತಮ್ಮ ಪ್ರತಿಭೆ, ಚಿಂತನಗಳ ವಿಭಿನ್ನ ಪ್ರಮಾಣ, ಮಿತಿಗಳ ಅಳವಿನಲ್ಲಿ ಸ್ವತಂತ್ರರಾಗಿದ್ದು ಅನ್ನೋನ್ಯಾಶ್ರಯರಾಗಿ ಪ್ರಸಂಗವೆಂಬ ಆಕರವನ್ನು ಆಧರಿಸಿ ನಿರ್ಮಿಸುವ ನಾಟಕ ಹತ್ತು ಜನ ಶಿಲ್ಪಿಗಳು ಸೇರಿ ನಿರ್ಮಿಸಿದ ಒಂದು ಭವನದ ಹಾಗೆ ಇದು. ಪ್ರಸಂಗದ ಚೌಕಟ್ಟನ್ನು ಬಿಟ್ಟರೆ ಉಳಿದಂತೆ ನಿರ್ದೇಶನ ಕೂಡ ಅವರವರದೇ. ಭಾಷೆ, ಭಾವಗಳ ಬಳಕೆಯಂತಹ ಅತ್ಯಂತ ಮುಖ್ಯವಾದ ಸಂಗತಿಗಳಲ್ಲೂ ಇಲ್ಲಿ ಕಲಾವಿದ ನಿಜವಾದ ಸ್ವ - ತಂತ್ರನಿದ್ದಾನೆ, ಇದು ಮಾತಿನ ಮಂಟಪ, ಇದೊಂದು ಕುತೂಹಲಕಾರಿ ವಿರೋಧಾಭಾಸ. ಕಲೆಗಳು ಮಾತಿನ ಮಿತಿಯನ್ನು ದಾಟುವ ಮನುಷ್ಯ ಪ್ರಯತ್ನದಿಂದ ಇಲ್ಲಿ ಮಾತೆ ಕಲೆ, ಅಂದರೆ ಮಾತಿನ ಮಿತಿಯನ್ನು ಮಾತಿನಿಂದಲೇ ಮೀರುವ ಪ್ರಯತ್ನ. ಇದು ಈ ಕಲೆಯ ಅನನ್ಯತೆ.*[] ಕಲಾದೃಷ್ಟಿಯಿಂದ ಎಲ್ಲ ಅಂಗಗಳೂ ಮುಖ್ಯವಾದರೂ ಸಾಮಾನ್ಯ ಪ್ರೇಕ್ಷಕನ ದೃಷ್ಟಿಯಿಂದ ಒಂದು ಅರ್ಥದಲ್ಲಿ ಯಕ್ಷಗಾನ ಪ್ರದರ್ಶನ ಸಂವಹನಕ್ಕೆ ಮಾತುಗಾರಿಕೆಯೇ ಪ್ರಧಾನವಾದ ಅಂಶ. ಈ ಅರ್ಥದಲ್ಲಿ ಇದು 'ವಾಚಿಕಾಭಿನಯಪ್ರಧಾನವಾದ ಪ್ರಬೋಧನಾತ್ಮಕ ಕಲೆ.+[]" ಮಾತು ಹೆಚ್ಚು ಸಾರ್ವತ್ರಿಕವಾದದ್ದು ಎಂಬುದು ಇದಕ್ಕೆ ಕಾರಣ.

ಯಕ್ಷಗಾನ ಅರ್ಥಧಾರಿ (ಅರ್ಥಗಾರ, ಅರ್ಥವಾಗಿ ಎಂಬ ಬಳಕೆಗಳೂ ಇವೆ.) ಒಂದು ಸಂಕೀರ್ಣ ಕಲಾಸನ್ನಿವೇಶದಲ್ಲಿ ಕೆಲಸಮಾಡುತ್ತಾನೆ. ಅವನ ಮುಂದೆ ಪುರಾಣಗಳ ಪ್ರಪಂಚವಿದೆ. ಈ ಪುರಾಣಗಳು ಆಧುನಿಕ ಸನ್ನಿವೇಶ ಕ್ಕಿಂತ ತೀರ ಭಿನ್ನವಾದ ಮಿಥೈಯ ಲೋಕ (Myth ಎಂಬರ್ಥದಲ್ಲಿ.) ಇದನ್ನು ಅವನು ಜನರ ಮುಂದೆ ಮಂಡಿಸಬೇಕು. ಕೇಳುಗರಾದ ಈ ಜನರು ಪುರಾಣವನ್ನು ವಿವಿಧವಾದ ಮಟ್ಟಗಳಲ್ಲಿ ಗ್ರಹಿಸುವವರು, ವಿವಿಧ ದೃಷ್ಟಿಗಳಿಂದ ನೋಡುವವರು. ಕೆಲವರಿಗೆ ಪುರಾಣವೆಂಬುದು ಬರಿಯ ಕತೆ, ಕೆಲವರಿಗೆ ಅದು ವಾಸ್ತವಸತ್ಯ, ಮತ್ತೆ ಕೆಲವರಿಗೆ ಶ್ರದ್ಧೆಯ ಅಧಿಷ್ಠಾನವಾದ ಧಾರ್ಮಿಕಗ್ರಂಥ, ಇನ್ನು ಕೆಲವರಿಗೆ ಅದು ರಂಜಕವಾದ ರಸವಿಷಯವಾದ ನಿಜ ಹೌದೊ ಅಲ್ಲವೋ ಎಂಬ ಬಗ್ಗೆ ಯೋಚಿಸುವ ಅವಶ್ಯಕತೆ ಇಲ್ಲದ ಒಂದು ಸಂಗತಿ. ರಂಗಭೂಮಿಯ ಪ್ರಧಾನ ಅಂಗವಾದ ರಸಿಕ ಮನೋಭೂಮಿಕೆ ಇದು. ಹಾಗೆಯೇ ಅರ್ಥಧಾರಿಗೆ ತನ್ನೊಂದಿಗೆ ವಿವಿಧ ಮಟ್ಟದ ವಿದ್ವತ್ತು ಪ್ರತಿಭೆ


  1. * ಇದು ವಿಮರ್ಶಕ ಲಕ್ಷ್ಮೀಶ ತೋಳ್ಳಾಡಿ ಇವರು ಮಾಡಿದ ವಿವೇಚನೆ.
  2. + ಮಲ್ಪೆ ಶಂಕರನಾರಾಯಣ ಸಾಮಗ - ಯಕ್ಷಗಾನಸೌರಭ ಗ್ರಂಥದಲ್ಲಿ.