ಈ ಪುಟವನ್ನು ಪ್ರಕಟಿಸಲಾಗಿದೆ

ಯಕ್ಷಗಾನ ರಂಗಭೂಮಿಯ ವಿಮರ್ಶನದಲ್ಲಿ ಬಲುದೊಡ್ಡ ಶೂನ್ಯವೊಂದು ಇದೆ. ಇದನ್ನು ಭರ್ತಿಮಾಡಲು ಪ್ರಭಾಕರ ಜೋಶಿ ಅವರಂತಹ ಹೊಸ ವರ್ಗದ ವಿದ್ವಾಂಸರ ಅಗತ್ಯವಿದೆ. ಇವರಲ್ಲಿರುವ ಗುಣವೆಂದರೆ ಇವರಿಗೆ ಕಲೆಯ ತಲಸ್ಪರ್ಶಿ ತಿಳುವಳಿಕೆಯಿದೆ. ಅದೇ ವೇಳೆ ವೃತ್ತಿಪರನಿಗೆ ಬಲು ಬಗೆಗಳಲ್ಲಿ ಇರಬಹುದಾದ ನಂಟು ಹಂಗುಗಳು ಇಲ್ಲ. ಯಕ್ಷಗಾನಕ್ಕೆ ಈಗ ಬೇಕಾಗಿರುವುದು ಯಾವ ಹಂಗೂ ಇಲ್ಲದ ವಸ್ತುನಿಷ್ಠವಾದ ವಿಮರ್ಶೆ. ಅದುವೇ ಶಾಸ್ತ್ರವೊಂದರ ಮೊಳಕೆ.

ಯಕ್ಷಗಾನವನ್ನು ಶಾಸ್ತ್ರೀಯರಂಗಕಲೆ ಎಂದು ಘೋಷಿಸಿ ಅದನ್ನು ಪೋಷಿಸಲು ಪ್ರತ್ಯೇಕ ವ್ಯವಸ್ಥೆಯೊಂದನ್ನು ರೂಪಿಸಲು ಇದು ಸಕಾಲ. ಹಾಗೆ ಘೋಷಿಸಲು ಹಿಂದೆಗೆಯುವ ಯಾವ ಕಾರಣವೂ ಇಲ್ಲಿಲ್ಲ. ಇಲ್ಲಿ ಕಲಾವಿದರಿಗಿರುವ ವಿಪುಲ ಸ್ವಾತಂತ್ರ್ಯ ಯಕ್ಷಗಾನವನ್ನು ಜಾನಪದವೋ ಎನ್ನುವ ಭ್ರಮೆಗೆ ಒಳಪಡಿಸುತ್ತದೆ ಅಷ್ಟೆ. ಜಾನಪದವೆಂದು ಹೆಸರಿಸಿ 'ಡೊಳ್ಳು ಕುಣಿತ'ದ ಸಾಲಿಗೆ ಸೇರಿಸಬಹು ದಾದ ಕಲೆ ಅಲ್ಲ ಕರಾವಳಿಯ ಯಕ್ಷಗಾನ. ಜೋಶಿ ಅವರ ಇಲ್ಲಿನ ಲೇಖನ ಗಳನ್ನು ಓದಿದಾಗ ಈ ರಂಗ ಎಷ್ಟು ಶ್ರೀಮಂತ, ವ್ಯವಸ್ಥಿತ ಮತ್ತು ಸಂಕೀರ್ಣ ಎನ್ನುವುದು ನಿಚ್ಚಳವಾಗುತ್ತದೆ. ಅದೇ ವೇಳೆ ವಿಮರ್ಶಾ ಅಭಿಯಾನ ಈಗ ಈ ರಂಗಕ್ಕೆ ಐತಿಹಾಸಿಕವಾಗಿ ಎಷ್ಟು ಅಗತ್ಯ ಎನ್ನುವುದೂ ಮನದಟ್ಟಾಗುತ್ತದೆ.

ನಮ್ಮ ದೇಶದಲ್ಲಿ ಓದು ಬರಹ ಹೆಚ್ಚಿದಂತೆಲ್ಲ ವಾಣಿಜ್ಯಕರಣ ವ್ಯಾಪಿಸಿಕೊಂಡುದು ಒಂದು ವಿಚಿತ್ರ. ಒಂದು ತಲೆಮಾರಿನ ಹಿಂದೆ ಕೂಡ ಇಲ್ಲಿದ್ದ ಫ್ಯೂಡಲ್ ವ್ಯವಸ್ಥೆ ತೊಲಗಿದುದರೊಂದಿಗೆ ಅದರಲ್ಲಿ ಅಂತರ್ಗತವಾಗಿದ್ದ ತ್ಯಾಗಬುದ್ಧಿ, ಕಷ್ಟ ಸಹಿಷ್ಣುತೆ ಇತ್ಯಾದಿ ಗುಣಗಳೂ ಮಂಗಮಾಯವಾಗಿವೆ. ಶಿಕ್ಷಣ ಪ್ರಸಾರ ದೊಂದಿಗೆ ಭಾರತೀಯಮನೋಭಾವದಲ್ಲಿ ವಾಣಿಜ್ಯಪರತೆ ಒಳಗೆ ಹೊಗೆಯಾಡು ವುದನ್ನು ಇರಿಸಿಕೊಂಡು ಹೊರಗೆ ತಿಳಿನಗೆ ಸೂಸುವ ವಣಿಕ್‌ಸ್ವಭಾವ ಇವು ನುಗ್ಗಿ ಸೇರಿಕೊಂಡುದು ನಿರ್ಲಿಪ್ತ ಚಿಂತಕನನ್ನು ವಿಸ್ಮಯಕ್ಕೆ ತಳ್ಳಿದೆ. ನಿಜಕ್ಕಾದರೆ ಭಾರತೀಯ ಜನಪದ - ಜಾತಿ, ಮತ, ಜನಾಂಗ ಭೇದವಿಲ್ಲದೆ - ಒಂದು ಕೋಮಟಿ ಸಮುದಾಯವಾಗಿ ಮಾರ್ಪಡುತ್ತಿದೆ. ಆಡಳಿತ ಮತ್ತು ವಾಣಿಜ್ಯ ಇವುಗಳನ್ನು ಅವಿನಾಭಾವಸಂಬಂಧದೊಳಗೆ ತುರುಕಿದ ಬ್ರಿಟಿಷ್ ರಾಜ್ಯಪದ್ಧತಿಯನ್ನು ಭಾರತೀಯ ಶ್ರೀಮಂತವರ್ಗ ರಕ್ತಗತಗೊಳಿಸಿದ ಬಗೆಗೆ ಬೆರಗಾಗಬೇಕು. ಲಾಭನಷ್ಟ ಪರಿಗಣನೆ ಮಾತ್ರ ಅಂತಿಮವೆಂದುಕೊಳ್ಳುವ ವಾಣಿಜ್ಯಪರತೆ ಯಕ್ಷಗಾನ ದಂಥ ಸಂಪ್ರದಾಯನಿಷ್ಠ ರಂಗಭೂಮಿಯನ್ನು ಕೂಡ ಹೇಗೆ ಕಬಳಿಸುತ್ತದೆ ಎಂಬುದಕ್ಕೆ ಕಳೆದ ಮೂರು ದಶಕಗಳ ಕಾಲ ವೃತ್ತಿಪರ ಮೇಳಗಳ ಬಯಲಾಟ ವನ್ನು ಕಂಡವರು ಸಾಕ್ಷಿಗಳಾಗಿ ನಿಲ್ಲುತ್ತಾರೆ. ಕಟೀಲು, ಮಂದರ್ತಿಗಳಂಥ,



viii