ಈ ಪುಟವನ್ನು ಪ್ರಕಟಿಸಲಾಗಿದೆ

ಅನುಭವಿಸಲಿ. ಅಯ್ಯೋ ! ದೇವಲೋಕದಲ್ಲಿ ದೇವತೆಗಳಲ್ಲದೆ, ಇನ್ನು ಯಾರೇ ಆಗಲಿ, ತಾವು ಅನುಭವಿಸಿದ ಭೋಗಕ್ಕೆ ಬೆಲೆಯನ್ನು ಕೊಡಬೇಕು ಎಂಬುದನ್ನು ಇವರು ತಿಳಿದಿದ್ದರೆ ಎಷ್ಟು ಚೆನ್ನಾಗಿತ್ತು !” ಎಂದು ಯೋಚಿಸುತ್ತ ವೃತ್ರನ ಕಡೆ ನೋಡುತ್ತಾನೆ. ಅಲ್ಲಿ ವಿಕಾರವಾಗಿ ರುಂಡವಿಲ್ಲದ ಕಬಂಧವೊಂದು ಕುಳಿತಂತೆ ಕಾಣುತ್ತಿದೆ. ಮತ್ತೊಮ್ಮೆ ನೋಡಿದನು. ಇನ್ನೂ ಒಮ್ಮೆ ನೋಡಿದನು. ಸುರಾಚಾರ್ಯನಿಗೆ ಹೇಗೆ ಹೇಗೋ ಆಯಿತು. “ಹಾಗಾದರೆ, ಇಂದೇ ಕೊನೆಯ ದಿನವೇನು? ಇಂದಿಗೆ ವೃತ್ರನ ಅವತಾರ ಪೂರ್ಣವಾಗುವುದೇನು?”

ಸುರಾಚಾರ್ಯನು ನಂಬಲಾರನು. ಆದರೆ ಸುಮ್ಮನಿರುವುದೆಂತು? ಕುಳಿತಿದ್ದ ಕಡೆಯಿಂದಲೇ, ಹಾಗೆಯೇ ಯಾರಿಗೂ ಗೊತ್ತಾಗದಂತೆ ಗುಟ್ಟಾಗಿ ದಿವ್ಯದೃಷ್ಟಿಯನ್ನು ಅವಲಂಬಿಸಿ ಸುತ್ತಲೂ ನೋಡಿದನು. ದಾನವೇಂದ್ರರು ಯಾರ ಮುಖದಲ್ಲೂ ತೇಜಸ್ಸಿಲ್ಲ. “ಹಾಗಾದರೆ ಇವರು ಇಲ್ಲಿ ಇರಲು ಇದೇ ಕೊನೆಯ ದಿನವೇನು” ಎಂದು ಅವನಿಗೆ ಆಶ್ಚರ್ಯವಾಯಿತು. ಹಾಗೆಯೇ ಶಚೀಪತಿಯನ್ನು ನೋಡಿದನು. ಆತನ ತೇಜಸ್ಸು ಒಂದು ಕಡೆ ಮಸುಳಿಸಿ, ಮೇಘಾವೃತವಾದ ಚಂದ್ರನಂತೆ ಡೊಂಕಾಗಿದ್ದರೆ, ಇನ್ನೊಂದುಕಡೆ ಮಧ್ಯಾಹ್ನದ ಸೂರ್ಯನಂತೆ ಪ್ರಚಂಡವಾಗಿದೆ. ಕೂಡಲೇ ಬ್ರಹ್ಮದೇವನ ಮಾತು ನೆನಪಾಯಿತು. “ಸರಿ, ಬ್ರಹ್ಮದೇವನು ಸೂಚಿಸಿದ ಕಾಲವು ಬಂದಂತಿದೆ. ಇನ್ನು ನಾನು ಮೈಯೆಲ್ಲ ಕಣ್ಣಾಗಿರಬೇಕಾದ ಕಾಲ ಬಂದಂತಿದೆ. ಏನಾದರೂ ಮಾಡಿ ಇಂದ್ರನಿಗೆ ಇದನ್ನು ಸೂಚಿಸಿದ್ದರೆ ಚೆನ್ನಾಗಿತ್ತಲ್ಲಾ ! ಅಥವಾ ಎಲ್ಲರ ಹೃದಯದಲ್ಲೂ ಕುಳಿತು, ಎಲ್ಲರನ್ನೂ ಪ್ರೇರೇಪಿಸುವ ಆ ಮಹಾವಿಷ್ಣುವಿಗೆ ನಮಸ್ಕಾರವು ಪ್ರಭುವೆ ! ನೀನು ದೇವತೆಗಳ ಬೆಂಬಲಿಗನು. ನಿನ್ನ ಅನುಗ್ರಹದಿಂದಲೇ ದೇವತೆಗಳು ಮೂರು ಲೋಕಗಳನ್ನೂ ಆಳುತ್ತಿರುವರು. ನಿನ್ನ ಕೃಪೆಯಿಂದಲೇ ವೃತ್ರನಂತಹ ಪರಮಪರಾಕ್ರಮಿಯ ಕೈಗೆ ಸಿಕ್ಕಿದರೂ ದೇವತೆಗಳು ಇನ್ನೂ ಬದುಕಿರುವರು. ಮತ್ತೆ ಕೃಪೆಮಾಡು. ನಿನ್ನ ಭಕ್ತರ ಅಳಿದ ಐಶ್ವರ್ಯವೆಲ್ಲವೂ ಮತ್ತೆ ಹಿಂದಕ್ಕೆ ಬರಲಿ. ಇಂದ್ರನು ಮತ್ತೆ ಇಂದ್ರನಾಗುವಂತೆ ಅನುಗ್ರಹಿಸು. ನಿನ್ನ ಪ್ರಚೋದನವಿಲ್ಲದೆ ಹುಲ್ಲುಕಡ್ಡಿಯೂ ಅಲ್ಲಾಡಲು ಸಾದ್ಯವಿಲ್ಲವೆಂದು ತಿಳಿದು, ಇಂದ್ರನನ್ನು ಕೈಬಿಡಬೇಡವೆಂದು ನಿನ್ನನ್ನು ಪ್ರಾರ್ಥಿಸುವೆನು” ಎಂದು ಕುಳಿತಲ್ಲಿಂದಲೇ ಪ್ರಾರ್ಥಿಸಿದನು. ಮನಸ್ಸು ಹರ್ಷಗೊಂಡು ತನ್ನ ಪ್ರಾರ್ಥನೆಯನ್ನು ದೇವನು ಕೇಳಿದನೆಂದು ಸೂಚಿಸಿತು.

ಭೋಜನವಾಗುತ್ತಿದ್ದ ಹಾಗೆಯೇ ವೃತ್ರನು ಇಂದ್ರನಿಗೆ ಹೇಳಿಕಳುಹಿಸಿದನು. ಆತನನ್ನು ಕರೆಯಿಸಿಕೊಂಡು ತನ್ನ ಸಂತೋಷದ ಆವೇಶದಲ್ಲಿ ದಾನವೇಂದ್ರರನ್ನೆಲ್ಲಾ