ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ಆಲೂಗಡ್ಡೆ

  ಆಲೂಗಡ್ಡೆಯ ಆಗಮನ ಯಾವಾಗ ಆಯಿತೆಂಬುದು ಸರಿಯಾಗಿ ಹೇಳಲಾಗದಿದ್ದರೂ 17ನೇ ಶತಮಾನದ ಆದಿಯಲ್ಲಿ ಅಂದರೆ ಯುರೋಪ್ ನಲ್ಲಿ ಉಪಯೋಗ ಮಾಡಿದ ಕೇವಲ 40ವರ್ಷಗಳಲ್ಲಿ ಕೆಲವು ಉನ್ನತ ಅಧಿಕಾರಗಳ ಕ್ಷೇತ್ರದಲ್ಲಿ ಇದು ಜನಪ್ರಿಯವಾಗಿತ್ತೆಂದು ಹೇಳಬಹುದು. ಮೊಟ್ಟ ಮೊದಲು ಪೋರ್ಚುಗೀಸರು ಭಾರತಕ್ಕೆ ತಂದಿರಬಹುದು ಎಂದು ಊಹಿಅಲಾಗಿದೆ. ಮಿಲಿಟರಿ ಅಧಿಕಾರಿಗಳು ಮತ್ತು ಇಂಗ್ಲಿಷರು ಈ ಹೊಸ ತರಕಾರಿಯನ್ನು ಹೂಗಳು ದ್ವಿಲಿಂಗ ಪುಷ್ಪಗಳು, ಪುಷ್ಪಪಾತ್ರೆ 5, ದಳ 5,ದಳಗಳ ಬಣ್ಣ ಬಿಳಿ, ನೀಲಿ, ಕಡುಗೆಂಪು, ಕೇಸರಗಳು 5, ಅಂಡಾಶಯ 3 ಭಾಗ, ಬಹು ಅಂಡಗಳುಳ್ಳ ಅಂಡಾಶಯ, ಫಲ ಬೆರಿ ಮಾದರಿಯದು.
  ಪುಲ್ ವ, ಅಪ್-ಟು-ಡೇಟ್, ಪ್ರೆಸಿಡೆಂಟ್, ಗ್ರೇಟ್ ಸ್ಕಾಟ್, ಕುಪ್ರಿ ಕುಂದನ್, ಹೈಬ್ರಿಡ್ 12,ಹೈಬ್ರಿಡ್ 13,ಸಾತೊ, ಮೆಜಸ್ಟಿಕ್. ಇಟ್ಯಾಲಿಯನ್ ವೈಟ್ ರೌಂಡ್, ಲೇಟ್ ಜರ್ಮನ್ - ಇವು ಆಲೂಗಡ್ಡೆಯ ಬೇರೆ ಬೇರೆ ತಳಿಗಳು.
  ಆಲೂಗಡ್ಡೆ ಸುಮಾರು 30-45 ಸೆಂಮೀ.ವರೆಗೆ ಬೆಳೆಯುವ ಸಣ್ಣ ಸಸ್ಯ. ಅದರ ಬೇರುಗಳು ನಾರಿನಂತಿವೆ. ಇವು ಭೂಮಿಯಲ್ಲಿ ಹೆಚ್ಚು ಆಳ ಹೋಗುವುದಿಲ್ಲ. ತೇವವಿರುವ ಭೂಮಿಯಲ್ಲಿ ಸು. 20 ಸೆಂಮೀ.ವರೆಗೊ ಹೋಗಬಹುದು. ಸಾಧಾರಣವಾಗಿ ಈ ಸಸ್ಯದಲ್ಲಿ ಕಾಯಿ ಬಿಡುವುದಿಲ್ಲ. ಸರಿಯಾದ ವಾತಾವರಣವಿದ್ದಾಗ ಕಾಯಿ ಬಿಡುತ್ತದೆ.
  ಗೆಡ್ಡೆ ಕಾಂಡದ ಕವಲಿನ ತುದಿಯಲ್ಲಿ ಹಲವಾರು ಇರುತ್ತದೆ. ಸ್ಟೋಲಾನ್ ಎಂದು ಇವುಗಳ ಹೆಸರು. ಗೆಡ್ಡೆ ಸಾಮಾನ್ಯವಾಗಿ ಚಿಕ್ಕದಾಗಿದ್ದು ದಪ್ಪವಾಗಿರುತ್ತದೆ. ಸಂಪೂರ್ಣವಾಗಿ ಬಲಿತ ಗೆಡ್ಡೆಯ ಮೇಲೆ ಹಲವಾರು ಸಣ್ಣ ಸಣ್ಣ ಕುಳಿಗಳಂತ್ತಿರುವ ಕಣ್ಣುಗಳನ್ನು ಕಾಣಬಹುದು. ಈ ಕಣ್ಣುಗಳ ಭಾಗವನ್ನು ಕತ್ತರಿಸಿ ಭೂಮಿಯಲ್ಲಿ ನೆಡಬಹುದು. ನಿರ್ಲಿಂಗರೀತಿಯಲ್ಲಿ ಸಸ್ಯವನ್ನು ಈ ರೀತಿ ವೃದ್ದಿಸಬಹುದು. ಹಾಗೆ ವೃದ್ದಿಗೊಂಡ ಗಿಡಗಳಲ್ಲಿ ಮತ್ತೆ ಗೆಡ್ಡೆಗಳು ಬೆಳೆದು ಪೀಳಿಗೆಯನ್ನು ಮುಂದುವರಿಸುತ್ತವೆ. ಸುಮಾರು ಎರಡು ತಿಂಗಳಲ್ಲಿ ಗಿಡ ಒಳ್ಳೆಯ ಆಕಾರದ ಗೆಡ್ಡೆಗಳನ್ನು ಕೊಡುವುದು.
  ಆಲೂಗೆಡ್ಡೆಯ ಬೆಳೆಗೆ ಭೂಮಿಯಲ್ಲಿರುವ ಶೈತ್ಯಾಂತ ಮತ್ತು ಹವಾಗುಣ ಬಹಳ ಮೂಖ್ಯ. ಬೆಳೆದ ಭವಿಷ್ಯವನ್ನೇ ಹವಾಗುಣ ನಿರ್ಧರಿಸುತ್ತದೆ. ಸಾಮಾನ್ಯವಾಗಿ ಆಲೂಗಡ್ಡೆ ತಂಪು ಹವೆಯಿರುವ ಮತ್ತು ತೇವವಿರುವ ಪ್ರದೇಶದಲ್ಲಿ ಬೆಳೆಯುತ್ತಾದೆ ಹೆಚ್ಚಾಗಿ ಸಿಮ್ಮು, ಡಾರ್ಜಿಲಿಂಗ್, ನೈನಿತಾಲ್, ರಾಂಚಿ, ಮಹಾಬಲೇಶ್ವರ, ನೀಲಗಿರಿ ಪ್ರದೇಶಗಳಲ್ಲಿ 800'-2000' ಮೀ. ಎತ್ತರದಲ್ಲೂ ಇದ್ನ್ನು ಬೆಳೆಸುತ್ತಾರೆ. ಬಯಲು ಪ್ರದೇಶದಲ್ಲಿ ಚಳಿಗಾಲದ ಬೆಳೆಯಾಗಿ ಕೂಡ ಇದರ ಕೃಷ್ಟಿ ನಡೆಯುತ್ತದೆ.
  ಕರ್ನಾಟಕ ರಾಜ್ಯದಲ್ಲಿ ಆಲೂಗಡ್ಡೆಯ ಬೆಳೆಯನ್ನು ಮೂರು ಕಾಲದ ಬೆಳೆಯಾಗಿ ವಿಭಾಗಿಸಬಹುದು. 1. ಮಳೆಗಾಲದ ಬೆಳೆ 2. ಚಳಿಗಾಲದ ಬೆಳೆ 3. ಬೇಸಗೆ ಬೆಳೆ. ಎಲ್ಲ ಋತುಗಳಲ್ಲಿಯೂ ಕರ್ನಾಟಕ ರಾಜ್ಯದಲ್ಲಿ ಆಲೂಗಡ್ಡೆ ಬೆಳೆಸಬಹುದಾದರೂ ಚಳಿಗಾಲದ ಬೆಳೆ ಫಸಲು ದೃಷ್ಟಿಯಿಂದ ಅತ್ಯುತ್ತಮ.
  ಮಳೆಗಾಲದ ಬೆಳೆ: ಬೇಸಗೆಯಲ್ಲಿ ಆಳವಾಗಿ ಅಗತೆ ಮಾಡಿ ಮುಂಗಾರು ಮಳೆ ಪ್ರಾರಂಭವಾದ ತತ್ ಕ್ಷಣ ರಾಗಿಪೈರು ನಾಟಿ ಮಾಡುತ್ತಾರೆ. ಬೆಳೆಯ ಅವಧಿ ಜಾತಿಗಳನ್ನು ಅನುಸರಿಸುತ್ತಾರೆ.