ಈ ಪುಟವನ್ನು ಪರಿಶೀಲಿಸಲಾಗಿಲ್ಲ.

೪೦೨ ಇಲಿಯಡ್

ತಮ್ಮ ನಾಡಿಗೇ ಆದ ಅಪಮಾನವೆಂದು ಕೆರಳಿದ ಗ್ರೀಕ್ ರಾಜರು ತಮ್ಮ ತಮ್ಮ ಯೋಧರೊಡನೆ ನೂರಾರು ಹಡಗುಗಳಲ್ಲಿ ಈಜಿಯನ್ ಸಮುದ್ರವನ್ನು ದಾಟಿ ಏಷ್ಯ ಮೈನರಿನ ವಾಯವ್ಯಮೂಲೆಯಲ್ಲಿ ಕಡಲತೀರಕ್ಕೆ 4.80ಕಿಮೀ. ದೂರದಲ್ಲಿದ್ದ ಟ್ರಾಯ್ ಕೋಟೆಗೆ ಮುತ್ತಿಗೆ ಹಾಕಿದರು. ಟ್ರಾಯ್ ಜನ (ಟ್ರೋಜನರು) ಕೋಟೆಯ ಬಾಗಿಲನ್ನು ಭದ್ರಪಡಿಸಿ ಒಂಬತ್ತು ವರ್ಷ ಕಳೆದರೂ ಅಲ್ಲಾಡಲಿಲ್ಲ.ಅಷ್ಟು ಕಾಲವೂ ಗ್ರೀಕರು ಸುತ್ತಮುತ್ತಲ ಸಣ್ಣಪುಟ್ಟ ರಾಜ್ಯಗಳಿಗೆ ಮುತ್ತಿಗೆ ಹಾಕಿ ಆವನ್ನು ಗೆದ್ದು ಅಲ್ಲಿನವರನೇಕರನ್ನು ಸೆರೆಯಾಳುಗಳಾಗಿಯೂ ದಾಸಿಯರಾಗಿಯೂ ಹಿಡಿದು ತಂದರು. ಅಂಥವರಲ್ಲಿ ಒಬ್ಬಳು ಅಕಿಲೀಸನ ದಾಸಿ ಬ್ರಿಸೇಯಿಸ್, ಬ್ರೈಸಿಸ್ ಎಂಬುವನ ಮಗಳು. ಗ್ರೀಕರ ಪ್ರಧಾನ ಸೇನಾಪತಿ ಮೆನೆಲಾಸನ ತಮ್ಮ ಆಗಮೆಮ್ನಾನ್‍ನ ದಾಸಿ ಕ್ರಿಸೇಯಿಸ್, ಕ್ರೈಸೀನ ಮಗಳು ಇನ್ನೊಬ್ಬಳು.ಕ್ರೈಸೀಸ್ ಅಪೊಲೊ ದೇವನ ಪೂಜಾರಿ, ಅವನು ತನ್ನ ಮಗಳಿಗುಂಟಾದ ಪಾಡನ್ನು ನೋಡಿ ಆ ದೇವತೆಗೆ ಮೊರೆಯಿಡಲು, ಗ್ರೀಕರನ್ನು ಶಿಕ್ಷಿಸುವ ಸಲುವಾಗಿ ಅಪೊಲೊ ವ್ಯಾಧಿಯೊಂದನ್ನು ಗ್ರೀಕ್ ಸೈನಿಕರಲ್ಲಿ ಹರಡಿದ. ಕಾಲ್ಟಾಸ್ ಎಂಬ ದಿವ್ಯಜ್ಞಾನಿಯಿಂದ ಈ ಪೀಡುಗಿಗೆ ಕಾರಣವನ್ನು ತಿಳಿದುಕೊಂಡ ಗ್ರೀಕರು ಕ್ರಿಸೇಯಿಸಳನ್ನು ಅವಳ ತಂದಗೆ ಹಿಂದಿರುಗಿಸಬೇಕೆಂದು ಒತ್ತಾಯ ಮಾಡಿದರು. ಹಾಗೆ ಮಾಡಲೇಬೇಕಾಗಿ ಬಂದಾಗ ಆಗಮೆಮ್ನಾನ್ ತನ್ನ ದಾಸಿ ಹೋದುದರಿಂದ ಅವಳಿಗೆ ಬದಲಾಗಿ ಅಕಿಲೀಸನ ದಾಸಿಯನ್ನು ಬಲವಂತವಾಗಿ ತಂದಿಟ್ಟುಕೊಂಡ. ಇದರಿಂದ ಅಸಮಾಧಾನಗೊಂಡ ಅಕಿಲೀಸ್ ತಾನು ಯುಧ್ಧದಲ್ಲಿ ಭಾಗವಹಿಸುವುದಿಲ್ಲವೆಂದು ಹೇಳಿ ತನ್ನ ಅನುಯಾಯಿಗಳಾದ ಮಿರ್ ಮಿಡನ್ನರನ್ನು ಕರೆದುಕೊಂಡು ದೂರನಿಂತ. ಅಕಿಲೀಸನ ತಾಯಿ ಥೆಟಿಸ್ ಎಂಬ ದೇವತೆ. ಅವಳು ತನ್ನ ಮಗನಿಗಾದ ಅಪಮಾನವನ್ನು ಕಂಡು ದುಃಖಿತಳಾಗಿ ದೇವಾಧಿದೇವ ಜ್ಯೂಸನ ಬಳಿಗೆ ಹೋಗಿ ದೂರಿತ್ತಳು. ಗ್ರೀಕರು ಅಕಿಲೀಸನ ಹಿರಿಮೆಯನ್ನು ಅರಿತುಕೊಳ್ಳುವಂತೆ ಮಾಡುವುದಾಗಿ ಜ್ಯೂಸ್ ಮಾತುಕೊಟ್ಟ.ಈ ದಾಸಿಯರ ಪ್ರಸಂಗ ಇಲಿಯಡ್‍ನ ಮೊದಲ ಕಾಂಡದ ಕಥೆ.

ಗ್ರೀಕರಿಗೆ ಅಕಿಲೀಸನ ಔನ್ನತ್ಯದ ಅರಿವಾಗಬೇಕಾದರೆ ಯುದ್ಧ ಆರಂಭವಾಗಬೇಕು. ಆದ್ದರಿಂದ ಎರಡನೆಯ ಕಾಂಡದಲ್ಲಿ ಜ್ಯೂಸ್ ಆಗಮೆಮ್ನಾನಿಗೊಂದು ಕನಸನ್ನು ಕಳುಹಿಸಿ ಯುದ್ಧ ಮಾಡಬೇಕೆಂದು ಸೂಚಿಸುತ್ತಾನೆ. ಆಗಮೆಮ್ನಾನ್ ತನ್ನ ಜನರನ್ನು ಪರೀಕ್ಷಿಸಲು ತಾವೆಲ್ಲ ಸ್ವದೇಶಕ್ಕೆ ಹಿಂದಿರುಗಬೇಕೆಂದು ಹೇಳುತ್ತಾನೆ. ತಕ್ಷಣ ಅವರೆಲ್ಲ ಸಂತೋಷದಿಂದ ಹಡಗುಗಳ ಕಡೆಗೆ ಓಡುತ್ತಾರೆ. ಒಡಿಸ್ಸಿಯಸ್ ಅವರನ್ನು ಹಿಂದಕ್ಕಟ್ಟುತ್ತಾನೆ. ಈ ಸಂದರ್ಭದಲ್ಲಿ ಗ್ರೀಕ್ ಹಡಗುಗಳನ್ನೂ ಗ್ರೀಕ್ ಸೈನ್ಯದ ಪ್ರಮುಖರನ್ನೂ ಕುರಿತ ವಿವರಗಳು ಬರುತ್ತವೆ. ಮೂರನೆಯ ಕಾಂಡದಲ್ಲಿ ಹೆಲೆನಳನ್ನು ಹಾರಿಸಿಕೊಂಡು ಬಂದು ಯುದ್ಧಕ್ಕೆ ಕಾರಣನಾಗಿದ್ದ ಪ್ಯಾರಿಸ್ ಅವಳ ಪತಿ ಮೆನೆಲಾಸ್‍ನೊಡನೆ ದ್ವಂದ್ವಯುದ್ಧದಲ್ಲಿ ತೊಡಗಿ ಸಾಯುತ್ತಾನೆ.ಅವನು ಸಾಯುವ ವೇಳೆಗೆ ಅವನ ಪಕ್ಷಪಾತಿಯಾದ ಸೌಂದರ್ಯಾಧಿದೇವತೆ ಆಫ್ರೋಡಿಟಿ ಅವನನ್ನು ಯುದ್ಧಬೂಮಿಯಿಂದ ಕರೆದೊಯ್ಯುತ್ತಾಳೆ. ನಾಲ್ಕನೆಯ ಕಾಂಡದಲ್ಲಿ ಗ್ರೀಕರ ಪರವಾಗಿರುವ ಅಥೀನದೇವಿ ಟ್ರಾಯ್ ಪಕ್ಷದ ಪ್ಯಾಂಡರಸ್ ಎಂಬಾತನನ್ನು ಮೆನಲಾಸನಿಗೆ ಗುರಿಯಿಟ್ಟು ಬಾಣಪ್ರಯೋಗ ಮಾಡುವಂತೆ ಪ್ರೇರೇಪಿಸಿ ಎರಡು ಸೈನ್ಯಗಳಿಗೂ ಮತ್ತೆ ಯುದ್ಧ ಆರಂಭವಾಗುವಂತೆ ಮಾಡುತ್ತಾಳೆ. ಐದನೆಯ ಕಾಂಡದಲ್ಲಿ ಗ್ರೀಕರ ಡಿಯೋಮಿಡಿಸ್ ವೀರಾವೇಶದಿಂದ ಹೋರಾಡಿ ಪ್ಯಾಂಡರಸನ್ನೂ ಇನ್ನಿತರ ಅನೇಕ ಟ್ರೋಜನರನ್ನೂ ಕೊಲ್ಲುತ್ತಾನೆ. ಟ್ರೋಜನರಿಗೆ ಸಹಾಯ ಮಾಡುವ ಆಫ್ರೋಡಿಟಿ ಮತ್ತು ಐರಿಸ್ ದೇವತೆಗಳೂ ಅವನ ಆಯುಧಗಳ ಸವಿಗಾಣದೆ ಹೋಗುವುದಿಲ್ಲ. ಆರನೆಯ ಕಾಂಡದಲ್ಲಿ ಟ್ರಾಯ್‍ನ ಹಿರಿಯ ರಾಜಕುಮಾರ ಹೆಕ್ಟರ್ ಟ್ರಾಯ್ ನಗರದವರೆಲ್ಲ ಅಥೀನಳಿಗೆ ಪ್ರಾರ್ಥನೆ ಸಲ್ಲಿಸಬೇಕೆಂದು ಸಲಹೆಕೊಟ್ಟು ತನ್ನ ಹೆಂಡತಿ(ಆಂಡ್ರೊಮೆಕೆ) ಮತ್ತು ಪುಟ್ಟಮಗುವನ್ನು ಮನಕರಗುವಂಥ ಸನ್ನಿವೇಶವೊಂದರಲ್ಲಿ ಭೇಟಿಮಾಡಿ ಬೀಳ್ಕೊಂಡು ಸಮರಭೂಮಿಗೆ ತೆರಳುತ್ತಾನೆ. ಏಳನೆಯ ಕಾಂಡದಲ್ಲಿ ಟ್ರೋಜನ್ ವೀರ ಹೆಕ್ಟರನಿಗೂ ಗ್ರೀಕರ ಕಡೆಯ ಏಜ್ಯಾಕ್ಸ್‌ಗೂ ಕಾಳಗ ನಡೆಯುತ್ತದೆ. ದೇವತೆಗಳು ಯಾರೂ ಯುದ್ಧದಲ್ಲಿ ಭಾಗವಹಿಸಕೂಡದೆಂದು ಜ್ಯೂಸ್ ಅಪ್ಪಣೆ ಮಾಡುತ್ತಾನೆ (ಎಂಟನೆಯಕಾಂಡ). ಹೀರಾ ಮತ್ತು ಅಥೀನ ದೇವಿಯರು ಮೊದಮೊದಲು ಇದನ್ನು ಒಪ್ಪದೆ ಇದ್ದರೂ ಆಮೇಲೆ ಸುಮ್ಮನಾಗುತ್ತಾರೆ. ಯುದ್ಧ ಗ್ರೀಕರಿಗೆ ಪ್ರತಿಕೂಲವಾಗಿ ತಿರುಗುತ್ತದೆ. ತತ್ಕಾರಣ (ಒಂಬತ್ತನೆಯ ಕಾಂಡದಲ್ಲಿ) ಆಗಮೆಮ್ನಾನ್ ಬ್ರಿಸೇಯಿಸಳನ್ನು ಅಕಿಲೀಸಿಗೆ ಹಿಂದಕ್ಕೆ ಕೊಟ್ಟುಬಿಡುವುದಾಗಿಯೂ ಜೊತೆಗೆ ಬೇರೆ ಉಡುಗೊರೆಗಳನ್ನು ಕೊಡುವುದಾಗಿಯೂ ಹೇಳಿಕಳುಹಿಸುತ್ತಾನೆ. ಅಕಿಲೀಸ್ ಈ ಸಂಧಾನಕ್ಕೆ ಒಪ್ಪದೆ ಕೋಪದಿಂದ ಸಿಡಿದೆದ್ದು ಮಾರನೆಯ ದಿನವೇ ಸ್ವದೇಶಕ್ಕೆ ಮರಳುವುದಾಗಿ ಶಪಥ ಮಾಡುತ್ತಾನೆ. ಹತ್ತನೆಯ ಕಾಂಡದಲ್ಲಿ ಒಡಿಸ್ಸಿಯಸ್ ಮತ್ತು ಡಿಯೊಮೀಡರು ಟ್ರಾಯ್ ಸೈನ್ಯವ್ಯೂಹದಲ್ಲಿ ಗೂಢಚರ್ಯೆ ನಡೆಸಿ ಆ ಕಡೆಯ ಕೆಲವರನ್ನು ಸಂಹರಿಸುತ್ತಾರೆ. ಹನ್ನೋಂದನೆಯ ಕಾಂಡದಲ್ಲಿ ಆಗಮೆಮ್ನಾನ್, ಒಡಿಸ್ಸಿಯಸ್, ಡಿಯೊಮೀಡಿಸ್ ಮೊದಲಾದವರು ಗಾಯಗೊಳ್ಳುತ್ತಾರೆ. ಅಕಿಲೀಸ್ ಯುದ್ಧ ಹೇಗೆ ಸಾಗುತ್ತಿದೆಯೆಂದು ನೋಡಿಬರಲು ತನ್ನ ಆಪ್ತ ಸ್ನೇಹಿತ ಪೆಟ್ರಾಕ್ಲಸನನ್ನು ಕಳುಹಿಸಿ ಕೊಡಿತ್ತಾನೆ. ವೃದ್ಧ ನೆಸ್ಟರ್ ಅಕಿಲೀಸ್ ಯುದ್ಧಕ್ಕೆ ಬರುವಂತೆ ಮಾಡಬೇಕೆಂದೂ ಅದಿಲ್ಲದಿದ್ದರೆ ತನ್ನ ಇತರ ಯೋಧರೊಡನೆ ಪೆಟ್ರಾಕ್ಲಿಸನನ್ನಾದರೂ ಕಳುಹಿಸಿಕೊಡಬೇಕೆಂದೂ ಸೂಚಿಸುತ್ತಾನೆ.ಹನ್ನೆರಡರಿಂದ ಹದಿನಾರನೆಯ ಕಾಂಡಗಳವರೆಗೂ ಯುದ್ಢದಲ್ಲಿ ಒಮ್ಮೆ ಆ ಕಡೆ ಒಮ್ಮೆ ಈ ಕಡೆ ಜಯ ಲಭಿಸುತ್ತದೆ. ಜ್ಯೂಸನ ಆಜ್ಞೆಗೆ ವಿರೋಧವಾಗಿಯೇ ದೇವತೆಗಳು ತಮತಮಗೆ ಬೇಕಾದವರಿಗೆ ಸಹಾಯವೆಸಗುತ್ತಾರೆ. ಕೊನೆಗೆ ಹೆಕ್ಟರ್ ನುಗ್ಗಿ ಬಂದು ಗ್ರೀಕರ ನಾವೆಗಳಿಗೆ ಬೆಂಕಿಯಿಡಲು ಯತ್ನಿಸುತ್ತಾನೆ. ಪೆಟ್ರಾಕ್ಲಿಸ್ ಅಕಿಲೀಸನನ್ನು ಯುದ್ಧಕ್ಕೆ ಬರಬೇಕೆಂದು ಬೇಡಿಕೊಳ್ಳುತ್ತಾನೆ. ಅಕಿಲೀಸ್ ತಾನು ಹೋಗಲು ಈಗಲೂ ಇಷ್ಟಪಡುವುದಿಲ್ಲ. ತನ್ನ ಯುದ್ಧಕವಚವನ್ನು ಗೆಳೆಯನಿಗೆ ಕೊಟ್ಟು ಅದನ್ನು ಧರಿಸಿಹೋಗಿ ಟ್ರೋಜನರನ್ನು ಹಿಂದಕ್ಕಟ್ಟಿ ಬರಬೇಕೆಂದು ಪೆಟ್ರಾಕ್ಲಿಸನಿಗೆ ಹೇಳುತ್ತಾನೆ. ಅಕಿಲೀಸನ ಕವಚವನ್ನು ಧರಿಸಿ ಹೋಗುವ ಪೆಟ್ರಾಕ್ಲಿಸ್ ಟ್ರೋಜನರನ್ನು ಟ್ರಾಯ್ ಕೋಟೆಯವರೆಗೂ ಅಟ್ಟಿಸಿಕೊಂಡು ಹೋಗುತ್ತಾನೆ. ಅಲ್ಲಿ ಅವನು ಹೆಕ್ಟರಿನಿಂದ ಹತನಾಗಿತ್ತಾನೆ(16ನೆಯ ಕಾಂಡ). ಹದಿನೇಳನೆಯ ಕಾಂಡದಲ್ಲಿ ಹೆಕ್ಟರ್ ಅಕಿಲೀಸನ ಕವಚವನ್ನು ಕಿತ್ತಿಟ್ಟುಕೊಳ್ಳೂತ್ತಾನೆ.ಅವನ ಮೃತದೇಹವನ್ನು ಮೆನೆಲಾಸ್ ಮೊದಲಾದವರು ಕಷ್ಟಪಟ್ಟು ಉಳಿಸಿಕೊಂಡು ಹೋಗುತ್ತಾರೆ.ಗೆಳೆಯನಿಗಾದ ದುರಂತವನ್ನು ಕಂಡು ಕೋಪೋದ್ರಿಕ್ತನಾಗುವ ಅಕಿಲೀಸ್ ಸೇಡು ತೀರಿಸಿಕೊಳ್ಳಲೆಂದು ಸಮರಕ್ಕಿಳಿಯುತ್ತಾನೆ. ಈಗ ಹೆಕ್ಟರನ ವಶವಾಗಿರುವ ಅವನ ಕವಚಕ್ಕೆ ಬದಲಾಗಿ ದೇವತೆಗಳ ಕಮ್ಮಾರ ಹಿಫೀಸ್ಟಸ್ ಅವನಿಗೊಂದು ಹೊಸ ಗುರಾಣಿಯನ್ನೂ ಇತರ ಆಯುಧಗಳನ್ನೂ ಮಾಡಿಕೊಡುತ್ತಾನೆ. ಆ ಗುರಾಣಿಯ ಮೇಲೆಲ್ಲ ಗ್ರೀಕರ ಜೀವನದ ಚಿತ್ರಗಳು ವಿಪುಲವಾಗಿ ಚಿತ್ರಿತವಾಗಿರುತ್ತವೆ. ಅವನ್ನು ಧರಿಸಿ ಅಕಿಲೀಸ್ (ತಾನು ಅಲ್ಪಾಯು ಎಂಬ ಭವಿಷ್ಯವಾಣಿಯಿದ್ದರೂ ಲೆಕ್ಕಿಸದೆ) ಮುಂದೆ ನುಗ್ಗಿ ಯುದ್ಧದ ಕಣವನ್ನು ಹೊಕ್ಕು ಹೋರಾಡತೊಡಗುತ್ತಾನೆ. ಅವನಿಲ್ಲದೆ ಗ್ರೀಕರಿಗೆ ಜಯ ದೊರೆಯಕೂಡದೆಂದು ಜ್ಯೂಸ್ ಥೆಟಿಸಳಿಗಿತ್ತಿದ್ದ ಮಾತು ಈಗ ಸತ್ಯವಾಗುತ್ತದೆ. ಜ್ಯೂಸ್ ದೇವನೇ ಈಗ ಒಂದು ಪಕ್ಷ ವಹಿಸುವುದರಿಂದ ಇತರ ಸ್ತ್ರೀಪುರುಷ ದೇವತೆಗಳೆಲ್ಲ ತಮಗೆ ಬೇಕಾದ ಕಡೆ ಸೇರಿ ಬೇಕಾದವರಿಗೆ ಸಹಾಯ ಮಾಡುತ್ತಾರೆ (21ನೆಯ ಕಾಂಡ). ಅಕಿಲೀಸ್ ಟ್ರೋಜನ್ ಸೈನಿಕರನ್ನು ಮಟ್ಟಹಾಕುತ್ತಾನೆ (21ನೆಯ ಕಾಂಡ). ಇಪ್ಪತೆರಡನೆಯ ಕಾಂಡದಲ್ಲಿ ಹೆಕ್ಟರ್ ಟ್ರಾಯ್ ಕೋಟೆಯ ಗೋಡೆಯ ಬಳಿ ಕಾದು ನಿಂತಿರುತ್ತಾನೆ. ಅಲ್ಲಿಗೆ ಬರುವ ರೋಷಭೀಷಣನಾದ ಅಕಿಲೀಸನನ್ನು ನೋಡಿ ಅವನು ಕಾಲುಕೀಳುತ್ತಾನೆ. ಅದರಿಂದ ಪ್ರಯೋಜನವಾಗುವುದಿಲ್ಲ. ಕಡೆಗೆ ಆತ ಅಕಿಲೀಸನ ಆಯುಧಕ್ಕೆ ತುತ್ತಾಗಿ ಸತ್ತುಬೀಳುತ್ತಾನೆ. ಅವನ ಶವವನ್ನು ತನ್ನ ರಥದ ಗಾಲಿಗೆ ಕಟ್ಟಿ ಮಣ್ಣಿನಲ್ಲಿ ಎಳೆದುಕೊಂಡು ಅಕಿಲೀಸ್ ತನ್ನ ಬಿಡಾರಕ್ಕೆ ಧಾವಿಸುತ್ತಾನೆ. ಹೆಕ್ಟರನ ನೆಂಟರಿಷ್ಟರ ದುಃಖ ಉಕ್ಕಿಬರುತ್ತದೆ. ಇಪ್ಪತ್ತಮೂರನೆಯ ಕಾಂಡದಲ್ಲಿ ಅಕಿಲೀಸ್ ಪೆಟ್ರಾಕ್ಲಿಸನ ಮೃತದೇಹದ ದಹನ ಮಾಡುತ್ತಾನೆ. ಅದರೊಡನೆ ಹನ್ನೆರಡು ಮಂದಿ ಟ್ರೋಜನ್ ಯುವಕರನ್ನು ಸುಡುತ್ತಾನೆ. ಆದರೆ (24ನೆ ಕಾಂಡ) ಹೆಕ್ಟರನ ದೇಹಕ್ಕೆ ಅವನು ಅತ್ಯಂತ ಅಗೌರವವನ್ನು ತೋರಿಸಲು ಜ್ಯೂಸ್ ಥೆಟಿಸಳನ್ನು ಕಳುಹಿಸಿ ಹೀಗೆ ಮಾಡಿದರೆ ಅವನು ದೇವತೆಗಳ ಕೋಪಕ್ಕೆ ಪಾತ್ರನಾಗಬೇಕಾಗುವುದರಿಂದ ಹೇಳಿಕಳಿಸುತ್ತಾನೆ. ಹೆಕ್ಟರನ ಮುದಿ ತಂದೆ ಪ್ರಿಯಮ್ ಮಗನ ದೇಹವನ್ನು ಹಿಂದಕ್ಕೆ ತೆಗೆದುಕೊಂಡು ಹೋಗಲು ರಾತ್ರಿಯ ಕತ್ತಲಲ್ಲಿ ಅಕಿಲೀಸನ ಬಿಡಾರಕ್ಕೆ ಬರುತ್ತಾನೆ. ಅವನನ್ನು ಕಂಡು ಮರುಕದಿಂದ ಕರಗುವ ಅಕಿಲೀಸ್ ಹೆಕ್ಟರನ ದೇಹವನ್ನು ಹಿಂದಕ್ಕೆ ಕೊಡಲು ಒಪ್ಪುವುದಲ್ಲದೆ ಹೆಕ್ಟರನ ಉತ್ತರಕ್ರಿಯೆಗಳೆಂದು ಕೆಲದಿನ ಯುದ್ಧ ನಿಲ್ಲಿಸುತ್ತಾನೆ. ಹೀಗೆ ಅಕಿಲೀಸನ ಹಿರಿಮೆ ಸ್ಥಾಪಿತವಾಗುತ್ತದೆ.

ಇದು ಇಲಿಯಡ್ ಕಾವ್ಯದ ಕಥೆ. ಇಲಿಯಡ್ ಎಂಬುದು ಟ್ರಾಯ್‍ನ ಇನ್ನೊಂದು ಹೆಸರಾದ ಇಲಿಯಮ್‍ನಿಂದ ಬಂದುದು (ಇಲ್ಲಸ್ ಎಂಬುವನು ಅದರ ಸ್ಥಾಪಕನೆಂಬ ನಂಬಿಕೆಯಿತ್ತು. ಇಲಿಯಮ್‍ನಲ್ಲಿ ಅವನ ಹೆಸರಿನ ಸೂಚನೆಯಿದೆ). ಟ್ರೋಜನ್ ಯುದ್ಧ ವಾಸ್ತವವಾಗಿ ನಡೆಯಿತ್ತೆಂಬುದಕ್ಕೆ ಪುರಾತತ್ತ್ವಜ್ಞರಿಗೆ ರುಜುವಾತು ಸಿಕ್ಕಿದೆ. ಪ್ರ.ಶ.ಪೂ. 12ನೆಯ ಶತಮಾನದಲ್ಲಿ ಗ್ರೀಕರಿಗೂ ಟ್ರಾಯ್ ಜನಕ್ಕೂ ಒಂದು ನಿಜವಾದ ಯುದ್ಧ ನಡೆದಿರಬೇಕು; ಅದರ ಯೋಧರ ಮತ್ತು ವೀರರ ವಿಚಾರವಾಗಿ ಅನೇಕಾನೇಕ ಕಥೆಗಳು ಹುಟ್ಟಿಕೊಂಡು ಬೆಳೆದಿರಬೇಕು. ಪ್ರ.ಶ ಪೂ. 8ನೆಯ ಶತಮಾನದ ಹೊತ್ತಿಗೆ ಇಂಥ ನೂರಾರು ಕಥೆ, ಕವನಗಳು ಜನಗಳಲ್ಲಿ ಬಾಯಿಂದ ಬಾಯಿಗೆ ಹಬ್ಬಿ ಪ್ರಚಾರವಾಗಿದ್ದಿರಬೇಕು.ಹೋಮರ್ ಎಂಬ ಕವಿ ಅವನ್ನು ಸಂಗ್ರಹಿಸಿ ಅವಕ್ಕೆ ಪರಸ್ಪರ ಸಂಬಂಧವನ್ನು ಕಲ್ಪಿಸಿ ಅವನ್ನು ಜೋಡಿಸಿ ಪರಿಷ್ಕರಿಸಿ ಇಲಿಯಡ್ ಕಾವ್ಯವಾಗಿ ಹೆಣೆದಿರಬೇಕು.

ಈ ಮಹಾಕಾವ್ಯದ ಪ್ರಾರಂಭದ ಪಂಕ್ತಿಗಳೇ ಹೇಳುವಂತೆ ಇದರ ವಸ್ತು "ಅಕಿಲೀಸನ ಕ್ರೋಧ". ಸತ್ತ ಮಹಾವೀರನ ಹೆಕ್ಕಾಹೆಕ್ಬರನ ಶವವನ್ನು ರಥಕ್ಕೆ ಕಟ್ಟಿ ಪ್ರತಿ ಬೆಳಗೂ ಅಕಿಲೀಸ್ ಅದನ್ನು ಮಣ್ಣಿನಲ್ಲಿ ಎಳೆಯುತ್ತಾನೆ. ಕ್ರೋಧವು ಮನುಷ್ಯನನ್ನು ಹೇಗೆ ಮೃಗವನ್ನಾಗಿ ಮಾಡಿಬಿಡುವುದೆಂಬ ಚಿತ್ರ ಇಲ್ಲಿದೆ. ಪ್ರಿಯಮ್ ಅಕಿಲೀಸನ ಗುಡಾರಕ್ಕೆ ಬಂದು ಮಗನ ದೇಹವನ್ನು ಬೇಡುವುದು ಜಗತ್ತಿನ ಸಾಹಿತ್ಯದ ಮರೆಯಲಾಗದ ದೃಶ್ಯಗಳಲ್ಲಿ ಒಂದು. ಅಕಿಲೀಸ್ ಕರಗಿ ಹೋಗಿ, ಪಶುವಾಗಿದ್ದವನು ಮತ್ತೆ ಮನುಷ್ಯನಾಗುತಾನೆ. ಹೆಕ್ಟರ್ ತನ್ನ ಹೆಂಡತಿಯನ್ನೂ ಮಗುವನ್ನು ನೊಡುವುದು, ಹೆಲೆನ್ ಹೆಕ್ಟರನ ಶವದ ಬಳಿ ದುಃಖಿಸುವುದು ಭಾವಾತಿರೇಕವಿಲ್ಲದೆ ಹೃದಯವನ್ನು ಮುಟ್ಟುವ ದೃಶ್ಯಗಳು.

ಈ ಮಹಾಕಾವ್ಯದಲ್ಲಿ ದೇವತೆಗಳ ಚಿತ್ರಣವೂ ಇದೆ. ಬಹುಮಟ್ಟಿಗೆ, ಈ ದೇವತೆಗಳಿಗಿಂತ ಬಹುಮಂದಿ ಮನುಷ್ಯರೇ ಉದಾತ್ತರಾಗಿ, ಗೌರವಾರ್ಹರಾಗಿ ಕಾಣುತ್ತಾರೆ. ದೇವತೆಗಳು ಅಮರರು, ಶಕ್ತಿಶಾಲಿಗಳು, ಅದರಿಂದ ಮನುಷ್ಯರು ಅವರಿಗೆ ತಲೆ ಬಾಗಿ ನಡೆಯಬೇಕು.