ಪುಣ್ಯವುಳ್ಳ ಕಾಲಕ್ಕೆ ಮಣ್ಣು



Pages   (key to Page Status)   


ಪುಣ್ಯವುಳ್ಳ ಕಾಲಕ್ಕೆ ಮಣ್ಣು ಹೊನ್ನಪ್ಪುದು
ಪುಣ್ಯವುಳ್ಳ ಕಾಲಕ್ಕೆ ಪಾಷಾಣ ಪರುಷವಪ್ಪುದು ನೋಡಾ. ಮುನ್ನ ಮುನ್ನವೆ
ಅಚ್ಚೊತ್ತಿದ ಭಾಗ್ಯ ಎನ್ನ ಕಣ್ಣ ಮುಂದೆ ಕಾಣಬಂದಿತ್ತು ನೋಡಾ ! ಮಣ್ಣ ಮರೆಯ ದೇಗುಲದೊಳಗೊಂದು ಮಾಣಿಕ್ಯವ ಕಂಡಬಳಿಕ
ಇನ್ನು ಮುನ್ನಿನಂತಪ್ಪುದೆ ಗುಹೇಶ್ವರಾ ?