ಪೃಥ್ವಿಗೆ ಹುಟ್ಟಿದ ಶಿಲೆ ಕಲುಕಟಿಗಂಗೆ ಹುಟ್ಟಿದ ಮೂರುತಿ ಮಂತ್ರಕ್ಕೆ ಲಿಂಗವಾಯಿತ್ತಲ್ಲಾ! ಈ ಮೂವರಿಗೆ ಹುಟ್ಟಿದ ಮಗನ (ಮಗುವ?) ಲಿಂಗವೆಂದು ಕೈವಿಡಿವ ಅಚ್ಚವ್ರತಗೇಡಿಗಳನೇನೆಂಬೆ ಗುಹೇಶ್ವರಾ.