ಪೃಥ್ವಿಯಲೊದಗಿದ ಘಟವು ಪೃಥ್ವಿಯಲಡಗಿದಡೆ ಆ ಪೃಥ್ವಿಯ ಚರಿತ್ರವೆ ಚರಿತ್ರ ನೋಡಾ ! ಅಪ್ಪುವಿನಲೊದಗಿದ ಘಟವು ಅಪ್ಪುವಿನಲಡಗಿದಡೆ ಆ ಅಪ್ಪುವಿನ ಚರಿತ್ರವೆ ಚರಿತ್ರ ನೋಡಾ ! ತೇಜದಲೊದಗಿದ ಘಟವು ತೇಜದಲಡಗಿದಡೆ ಆ ತೇಜದ ಚರಿತ್ರವೆ ಚರಿತ್ರ ನೋಡಾ ! ವಾಯುವಿನಲೊದಗಿದ ಘಟವು ವಾಯುವಿನಲಡಗಿದಡೆ ಆ ವಾಯುವಿನ ಚರಿತ್ರವೆ ಚರಿತ್ರ ನೋಡಾ ! ಆಕಾಶದಲೊದಗಿದ ಘಟವು ಆಕಾಶದಲಡಗಿದಡೆ ಆ ಆಕಾಶದ ಚರಿತ್ರವೆ ಚರಿತ್ರ ನೋಡಾ ! ಗುಹೇಶ್ವರನೆಂಬ ಲಿಂಗದಲೊದಗಿದ ಘಟವು ಲಿಂಗದಲಡಗಿದಡೆ
ಆ ಲಿಂಗದ ಚರಿತ್ರವೆ ಚರಿತ್ರ ನೋಡಾ.