ಪೃಥ್ವಿಯೊಳಗಿಲ್ಲ ಆಕಾಶದೊಳಗಿಲ್ಲ ಚತುರ್ದಶ ಭುವನಾದಿ ಭುವನಂಗಳೊಳಗೆಯೂ ಇಲ್ಲ. ಹೊರಗೆಯೂ ಇಲ್ಲ_ಏನಾಯಿತ್ತೆಂದರಿಯೆನಯ್ಯಾ. ಗುಹೇಶ್ವರ ಅಂದೂ ಇಲ್ಲ ಇಂದೂ ಇಲ್ಲ ಎಂದೂ ಇಲ್ಲ.