ಪೃಥ್ವಿಯ ಪಾಷಾಣ ಪೃಥ್ವಿಯ ಮೇಲೆ ಬಿದ್ದುಹೋದಡೆ ಪ್ರಾಣಲಿಂಗ ಹೋಯಿತ್ತು ಪ್ರಾಣಲಿಂಗ ಹೋಯಿತ್ತು ಎಂಬಿರಿ. ಪ್ರಾಣಲಿಂಗ ಹೋದಡೆ ನೀವು ನುಡಿವ ಪರಿಯೆಂತು ? ಅಂತರಂಗದಿ ಪ್ರಾಣಲಿಂಗಸಂಬಂಧದ ಸುದ್ದಿಯ (ಹೊಲಬ?) ನರಿಯರಾಗಿ ಗುಹೇಶ್ವರಾ ನೀ ಮಾಡಿದ ಬೆಡಗು ಬಿನ್ನಾಣಕ್ಕೆ ನಾನು ಬೆರಗಾದೆನು !