Pages   (key to Page Status)   

ಪೃಥ್ವಿ ಪೃಥ್ವಿಯ ಕೂಡದ ಮುನ್ನ
ಅಪ್ಪು ಅಪ್ಪುವ ಕೂಡದ ಮುನ್ನ
ತೇಜ ತೇಜವ ಕೂಡದ ಮುನ್ನ
ವಾಯು ವಾಯುವ ಕೂಡದ ಮುನ್ನ
ಆಕಾಶ ಆಕಾಶವ ಕೂಡದ ಮುನ್ನ ಪಂಚೇಂದ್ರಿಯಂಗಳೆಲ್ಲ ಹಂಚುಹರಿಯಾಗದ ಮುನ್ನ ಚೆನ್ನಮಲ್ಲಿಕಾರ್ಜುನಂಗೆ ಶರಣೆನ್ನಿರೆ ?