ಪೃಥ್ವಿ ಭಾವಿಸಲಾಗದು. ಆಕಾಶಮಧ್ಯದಲ್ಲಿ


Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪೃಥ್ವಿ ಆಕಾಶಮಧ್ಯದಲ್ಲಿ ಉತ್ಪತ್ತಿಯಾದ ಸಕಲ ಪ್ರಾಣಿಗಳ ಶಿವನೆಂದು ಭಾವಿಸಲಾಗದು. ಅದೇನು ಕಾರಣವೆಂದೊಡೆ : ಆ ಸಕಲ ಪ್ರಾಣಿಗಳು ಶಿವನಾದಡೆ ಮದಮತ್ಸರಂಗಳಿಂದೆ ಒಂದನೊಂದು ಕೊಂದು ಕೂಗಿ ತಿಂದು ತೇಗಲೇತಕೊ ? ಆ ಸಕಲ ಪ್ರಾಣಿಗಳು ಶಿವನಾದಡೆ ಜಾತಿ ವರ್ಣಾಶ್ರಮ ಕುಲಗೋತ್ರ ನಾಮಸೀಮೆ ಬಂದ ಬಟ್ಟೆಗೆ ಬಡಿದಾಡಲೇತಕೊ ? ಆ ಸಕಲ ಪ್ರಾಣಿಗಳು ಶಿವನಾದಡೆ ಹಮ್ಮು ಬಿಮ್ಮು ಗರ್ವ ಅಹಂಕಾರ ಹೆಮ್ಮೆ ಹಿರಿತನಕೆ ಹೊಡೆದಾಡಿ ಮಡಿದು ಹೋಗಲೇತಕೊ ? ಆ ಸಕಲ ಪ್ರಾಣಿಗಳು ಶಿವನಾದಡೆ ಮಲತ್ರಯಂಗಳ ಬಲೆಯಲ್ಲಿ ಸಿಲ್ಕಿ ಭವಭವಂಗಳಲ್ಲಿ ತೊಳಲಿ ಬಳಲಿ ಬೆಂಡಾಗಲೇತಕೊ ? ಇದು ಕಾರಣ
ಅನಾದಿಸಂಸಿದ್ಧವಾದ ಪರಮ ಜಂಗಮಲಿಂಗವೇ ಶಿವನಲ್ಲದೆ ಭವಭವಂಗಳಲ್ಲಿ ಸತ್ತು ಹುಟ್ಟುವ ಸಕಲ ಪ್ರಾಣಿಗಳ ಶಿವನೆಂದಡೆ ಅಘೋರನರಕ ತಪ್ಪದಯ್ಯ ಅಖಂಡೇಶ್ವರಾ.