ಪ್ರಣತೆಯೂ ಇದೆ ಬತ್ತಿಯೂ ಇದೆ; ಜ್ಯೋತಿಯ ಬೆಳಗುವಡೆ ತೈಲವಿಲ್ಲದೆ ಪ್ರಭೆ ತಾನೆಲ್ಲಿಯದೊ? ಗುರುವಿದೆ ಲಿಂಗವಿದೆ; ಶಿಷ್ಯನ ಸುಜ್ಞಾನ ಅಂಕುರಿಸದನ್ನಕ್ಕರ ಭಕ್ತಿ ಎಲ್ಲಿಯದೊ? `ಸ್ಯೋಹಂ' ಎಂಬುದಕ್ಕೆ ದಾಸೋಹವ ಮಾಡದಿರ್ದಡೆ ಅತಿಗಳೆವೆ ನೋಡಾ ಗುಹೇಶ್ವರಾ.