ಪ್ರಣವಮಂತ್ರವ ಕರ್ಣದಲ್ಲಿ ಹೇಳಿ,


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪ್ರಣವಮಂತ್ರವ ಕರ್ಣದಲ್ಲಿ ಹೇಳಿ
ಶ್ರೀಗುರು ಶಿಷ್ಯನ ಅಂಗದ ಮೇಲೆ ಲಿಂಗಪ್ರತಿಷೆ*ಯ ಮಾಡಿದ ಬಳಿಕ
ಪ್ರಾಣದಲ್ಲಿ ಲಿಂಗವಿಪ್ಪುದೆಂಬ ವ್ರತಗೇಡಿಗಳ ಮಾತ ಕೇಳಲಾಗದು. ಒಳಗಿಪ್ಪನೆ ಲಿಂಗದೇವನು ಮಲ ಮೂತ್ರ ಮಾಂಸದ ಹೇಸಿಗೆಯೊಳಗೆ ? ಅಲ್ಲಿ ಪ್ರಾಣವಿಪ್ಪುದಲ್ಲದೆ ಲಿಂಗವಿಪ್ಪುದೆ ? ಆ ಪ್ರಾಣವ ತಂದು ತನ್ನ ಇಷ್ಟಲಿಂಗದಲ್ಲಿ ಇರಿಸಿ ನೆರೆಯ ಬಲ್ಲಡೆ
ಆತನೆ ಪ್ರಾಣಲಿಂಗಸಂಬಂಧಿ. ಅಲ್ಲದವರ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು