ಪ್ರಥಮ ಕಾಲದಲ್ಲಿ ನಿರಾಲಂಬಿಯಾಗಿರ್ದಿರಯ್ಯಾ



Pages   (key to Page Status)   


ಪ್ರಥಮ ಕಾಲದಲ್ಲಿ ನಿರಾಲಂಬಿಯಾಗಿರ್ದಿರಯ್ಯಾ ದ್ವಿತೀಯ ಕಾಲದಲ್ಲಿ ತೇಜೋಮೂರ್ತಿಯಾಗಿದ್ದಿರಯ್ಯಾ. ತೃತೀಯ ಕಾಲದಲ್ಲಿ ನಾದಮೂರ್ತಿಯಾಗಿರ್ದಿರಯ್ಯಾ. ಚತುರ್ಥ ಕಾಲದಲ್ಲಿ ಚೈತನ್ಯರೂಪ ತಾಳಿರ್ದಿರಯ್ಯಾ. ಪಂಚಮ ಕಾಲದಲ್ಲಿ ಧರ್ಮಮೂರ್ತಿಯಾಗಿರ್ದಿರಯ್ಯಾ. ಷಷ* ಕಾಲದಲ್ಲಿ ಪರಮಪುರುಷಾರ್ಥಸಾಧನವಾಗಿ
ತ್ರಿವಿಧಭಕ್ತಿಗೆ ನೀವೇ ಕಾರಣವಾಗಿ ಬಂದಿರಿ ಪ್ರಮಥರು ಸಹಿತ
ಮುಟ್ಟಿ ಪ್ರಾಣಲಿಂಗದ ಹರಿವ ತೋರಿಸಬೇಕೆಂಬ ನಿಮಿತ್ತ. ಬೆಸನವಿಡಿದು ನಿಮ್ಮ ಕರುಣದ ಶಿಶುವಾಗಿ ಹುಟ್ಟಿದೆ ನಿಮ್ಮ ಕರಸ್ಥಲದಲ್ಲಿ ಕೂಡಲಚೆನ್ನಸಂಗಮದೇವಾ ನಿಮ್ಮ ಮಹಿಮೆಗೆ ನಮೋ ನಮೋ ಎನುತಿರ್ದೆನು