ಪ್ರಸಾದಲಿಂಗ ಉಳ್ಳನ್ನಕ್ಕರ ಪ್ರಾಣಲಿಂಗವೆಂಬ ವಾರ್ತೆ ಭಂಗ ನೋಡಾ ಬಸವಣ್ಣಾ. ಬೀದಿಯಲ್ಲಿ ಕೊಡನನೊಡೆದು ಬಯಲನುಡುಗಿದಡೆ ಉಂಟೆ ಹೇಳಾ ? ಗುಹೇಶ್ವರಲಿಂಗವ ಬೇರೆಮಾಡಿ ಅರಸಲುಂಟೆ ಬಸವಣ್ಣಾ ?