ಪ್ರಾಣಲಿಂಗ ಪರಾಪರವೆಂದರಿದು ಅಣು ರೇಣು ತೃಣ ಕಾಷ*ದಲ್ಲಿ ಕೂಡಿ ಪರಿಪೂರ್ಣಶಿವನೆಂದರಿದು ಇಂತು_ಕ್ಷಣವೇದಿ ಅಂತರಂಗವ ವೇಧಿಸಲ್ಕೆ ಅಗಣಿತ ಅಕ್ಷೇಶ್ವರ ತಾನೆಂದರಿದು ಪ್ರಣವಪ್ರಭೆಯ ಮೇಲಣ ಪರಂಜ್ಯೋತಿ ತಾನೆಂದರಿದ ಕಾರಣ ಗುಹೇಶ್ವರಾ ನಿಮ್ಮ ಶರಣನುಪಮಾತೀತನು.