ಪ್ರಾಣಲಿಂಗ ಪ್ರತಿಗ್ರಾಹಕನಾದ ಬಳಿಕ ಲಿಂಗವಿರಹಿತನಾಗಿ ನಡೆವ ಪರಿಯೆಂತೊ ಲಿಂಗವಿರಹಿತನಾಗಿ ನುಡಿವ ಪರಿಯೆಂತೊ ಪಂಚೇಂದ್ರಿಯ ಸುಖವನು ಲಿಂಗವಿರಹಿತನಾಗಿ ಭುಂಜಿಸಲಾಗದು ಲಿಂಗವಿರಹಿತವಾಗಿ ಉಗುಳ ನುಂಗಲಾಗದು ಇಂತೆಂದುದು ಕೂಡಲಸಂಗನ ವಚನ.