ಪ್ರಾಣಲಿಂಗ ಪ್ರವೇಶಿತನಾಗಿ ಪ್ರಸಾದದಲ್ಲಿ ಸನ್ನಹಿತನಯ್ಯಾ ಲಿಂಗಾರ್ಪಿತವಲ್ಲದೆ ಅನರ್ಪಿತವ ಮುಟ್ಟಲೀಯನಯ್ಯಾ ಅಂಗಗುಣಂಗಳೆಲ್ಲವನತಿಗಳೆದು ಪ್ರಸಾದದಲ್ಲಿ ಬ್ರಹ್ಮಚಾರಿಯಾದನು ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.