ಪ್ರಾಣ ಲಿಂಗಕ್ಕೆ ಆಗಿ ಲಿಂಗ ಪ್ರಾಣಕ್ಕೆ ಆಗಿ ಆಚಾರ ಅನುಭಾವ ದ್ವಿವಿಧ ಸನುಮತವಾಗಿ ತನು ಪ್ರಸಾದಕ್ಕೆಯಾಗಿ ಪ್ರಸಾದ ತನುವಿಂಗಾಗಿ ಶರೀರಪ್ರೇಮದಿಂ ಸರ್ವಾಂಗ (ಲಿಂಗ) ನೋಡಾ. ಬಂದುದೆ ಓಗರ ನಿಂದುದೆ ಪ್ರಸಾದ. ಅಲ್ಲಿ ನಿತ್ಯನಿರಂತರ ಸಾವಧಾನಿ ಕೂಡಲಚೆನ್ನಸಂಗಾ ನಿಮ್ಮ ಶರಣ.