ಪ್ರಾಣ ಲಿಂಗವೆಂದರಿದ ಬಳಿಕ ಪ್ರಾಣ ಪ್ರಸಾದವಾಯಿತ್ತು. ಲಿಂಗ ಪ್ರಾಣವೆಂದರಿದ ಬಳಿಕ ಅಂಗದಾಸೆ ಹಿಂಗಿತ್ತು. ಲಿಂಗ ಸೋಂಕಿನ ಸಂಗಿಗೆ ಕಂಗಳೆ ಕರುವಾದವಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ ಹಿಂಗದೆ ಅನಿಮಿಷನಾಗಿಹ ಶರಣಂಗೆ.