ಪ್ರಾರಬ್ಧ ಪ್ರಯತ್ನಗಳ ತಾರತಮ್ಯವನಿಲ್ಲಿ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪ್ರಾರಬ್ಧ ಪ್ರಯತ್ನಗಳ ತಾರತಮ್ಯವನಿಲ್ಲಿ ಹೇಳಿಹೆ ಕೇಳಿರಯ್ಯಾ: ಪ್ರಯತ್ನದ ಹೆಚ್ಚು ಕುಂದಿನಂತೆ
ಇಂದಾಗಲಿ ಮುಂದಾಗಲಿ ಪ್ರಾರಬ್ಧವು ಫಲಪದವನೀವುದಲ್ಲವೆ ? ``ಅತ್ಯುತ್ಕಟೈಃ ಪುಣ್ಯಪಾಪೈರಿಹೈವ ಫಲಮಶ್ನುತೇ ಎಂದುದಾಗಿ ಪಿರಿದಪ್ಪ ಪುಣ್ಯಪಾಪಂಗಳು ಇದೆ ಜನ್ಮದಲ್ಲಿಯೆ ಫಲವನೀಯದೆ ಮಾಣವು. ವಿಶ್ವಾಮಿತ್ರನು ಕ್ಷತ್ರಿಯನಾದಡೆಯೂ
ತನ್ನ ತಪಃಪ್ರಭಾವದಿಂದ ಬ್ರಾಹ್ಮಣನಾಗಲಿಲ್ಲವೆ ? ಮಾರ್ಕಂಡೇಯನು ಅತ್ಯುತ್ಕಟವಾದ ಶಿವಭಕ್ತಿಯಿಂದ ಚಿರಂಜೀವಿಯಾಗಲಿಲ್ಲವೆ ? ರಾವಣ ಕೀಚಕಾದಿಗಳು ಪಾಪಾಧಿಕ್ಯದಿಂದ ಹತಭಾಗ್ಯರಾಗಲಿಲ್ಲವೆ ? ಅದು ಕಾರಣ_ತಾನು ಕೈಕೊಂಡ ಕಜ್ಜದಲ್ಲಿ ಪ್ರಯತ್ನವೆ ಪ್ರಾರಬ್ಧವಾಗಿ ಫಲವೀವುದರಿಂದ ಪ್ರಾರಬ್ಧಕ್ಕಿಂತ ಪ್ರಯತ್ನವೇ ಮಿಗಿಲಾಗಿಪ್ಪುದು ಕಾಣಾ
ಕೂಡಲಚೆನ್ನಸಂಗಮದೇವಾ