ಫಲಪದವಿಯ ಬಯಸಿ ಮಾಡಲಾಗದು ಗುರುಭಕ್ತಿಯ. ಫಲಪದವಿಯ ಬಯಸಿ ಮಾಡಲಾಗದು ಲಿಂಗಪೂಜೆಯ. ಫಲಪದವಿಯ ಬಯಸಿ ಮಾಡಲಾಗದು ಜಂಗಮಾರ್ಚನೆಯ. ಅದೇನು ಕಾರಣವೆಂದೊಡೆ : ಬಯಕೆಯ ಭಕ್ತಿಯ ಪೂರ್ವಪುರಾತನರು ಮಚ್ಚರು. ನಮ್ಮ ಅಖಂಡೇಶ್ವರದೇವನು ಹಂಗಿನ ಭಕ್ತರನೊಲ್ಲ ನೋಡಾ.