ಬಂದುದ ಕೈಕೊಳ್ಳಬಲ್ಲಡೆ ನೇಮ ಇದ್ದುದ ವಂಚನೆಯ ಮಾಡದಿದ್ದಡೆ ನೇಮ. ನಡೆದು ತಪ್ಪದಿದ್ದಡೆ ಅದು ನೇಮ ನುಡಿದು ಹುಸಿಯದಿದ್ದಡೆ ಅದು ಮುನ್ನವೆ ನೇಮ. ನಮ್ಮ ಕೂಡಲಸಂಗನ ಶರಣರು ಬಂದಡೆ ಒಡೆಯರಿಗೊಡವೆಯನೊಪ್ಪಿಸುವುದೆ ನೇಮ. 231