Pages   (key to Page Status)   


ಬಯಸಿ ಬಂದುದು ಅಂಗಭೋಗ ಬಯಸದೇ ಬಂದುದು ಲಿಂಗಭೋಗವೆಂದು ವಚನವನೋದಿ
ಕಾರ್ಯಕ್ಕಾಗಿ ಬಂದ ವೇಷಧಾರಿಗಳ ಕಂಡು ಹಿಗ್ಗಿ ಹಾರೈಸಿ ಅನ್ನದಾಶೆಯಿಂದ ಒಪ್ಪುಗೊಳಿಸಿ ಬಯಸಿ ಬಾಯಾರಿ ಬಳಲಬಾರದೆಂದು
ಗೋಳಿಟ್ಟು
ಬಗುಳಾಡಿ
ಅನ್ನ ಅಶನೋಪಜೀವಿ ಶೇಷ ಭೋಗಂಗಳಿಗೆ ಕಕ್ಕುಳ ಕುದಿದು ಬಿಕ್ಕನೆ ಬಿರಿದು ಮತ್ತೆ ಲಿಂಗಾಣತಿಯೆಂಬ ವೇಷಧಾರಿಗಳಿಗೆ ಅಘೋರನರಕ ತಪ್ಪದು ಗುಹೇಶ್ವರಾ.