ಬಸವಣ್ಣನೆ ಪ್ರಾಣಲಿಂಗವೆಂದು ಭಾವಿಸಿ ದೃಷ್ಟಿನಟ್ಟು ಸೈವೆರಗಾದುದ ಕಂಡೆ_ಕಲ್ಪಿಸಿ ಮನ ನಟ್ಟು ನಿಬ್ಬೆರಗಾಯಿತ್ತಯ್ಯಾ ! ಗುಹೇಶ್ವರಾ ನಿಮ್ಮಲ್ಲಿ ಸರ್ವನಿರ್ವಾಣಿ ಸಂಗನಬಸವಣ್ಣನೆ ಎನ್ನ ಪ್ರಾಣಲಿಂಗವೆಂದರಿದು ನೀನೆನ್ನ ಒಳಕೊಂಡ ಗುರುವೆಂದು ಕಂಡೆನಯ್ಯಾ ನಿಮ್ಮ ಧರ್ಮ ನಿಮ್ಮ ಧರ್ಮ