ಬಾಲಾಭ್ಯಾಸವ ಮಾಡಹೋದಡೆ ಎನ್ನ ಸುರಗಿ ಎನ್ನ ನಟ್ಟಿತು ಎಂತಯ್ಯಾ ಕಲಿಯೊಡನೆ ಶ್ರವವ ಮಾಡುವೆನು ರಾಯ ರಾಜಗುರು ಜಗದ ಬಿನ್ನಾಣಿಯ ತೊಡಕ ಬಿಡಿಸಬಾರದು. ಸರಸದ ಮೇಲೆ ಹಿಡಿಯ ಹೋದಡೆ ಚದುರಂಗದ ಮೇಲೆ ಮಸಿಯ ತೋರಿದ ಕೂಡಲಸಂಗಮದೇವ.