ಬಿರುಗಾಳಿ ಬೀಸಿ ಮರ ಮುರಿವಂತಹ ಸುಳುಹ ಸುಳಿಯದೆ
ತಂಗಾಳಿ ಪರಿಮಳದೊಡಗೂಡಿ ಸುಳಿವಂತೆ ಸುಳಿಯಬೇಕು.
ಸುಳಿದಡೆ ನೆಟ್ಟನೆ ಜಂಗಮವಾಗಿ ಸುಳಿಯಬೇಕು.
ನಿಂದಡೆ ನೆಟ್ಟನೆ ಭಕ್ತನಾಗಿ ನಿಲ್ಲಬೇಕು.
ಸುಳಿದು ಜಂಗಮವಾಗಲರಿಯದ
ನಿಂದು ಭಕ್ತನಾಗಲರಿಯದ ಉಭಯಭ್ರಷ್ಟರನೇನೆಂಬೆ ಗುಹೇಶ್ವರಾ