Pages(key to [[Help:Page Status{{!}}Page Status]])
ಬಿಳಿಯ ಮುಗಿಲ ನಡುವಣ ಕರಿಯನಕ್ಷತ್ರ ಮಧ್ಯದಲ್ಲಿ ಉರಿಯ ಅಂಕುರ ಹುಟ್ಟಿ ಒಂದೆರಡೆಂಬಂತೆ ತೋರುತ್ತದೆ ಹೊಸ್ತಿಲ ಜ್ಯೋತಿಯಂತೆ ಒಳಹೊರಗೆ ಬೆಳಗುತ್ತದೆ. ಅದು ನೋಡಿದಡೆ ಘನ ನೋಡದಿದ್ದಡೆ ಸಹಜ. ಈ ಭೇದವ ಗುಹೇಶ್ವರಲಿಂಗದಲ್ಲಿ ಚನ್ನಬಸವಣ್ಣ ಬಲ್ಲನು. ಬೆಸಗೊಂಬ ಬಾರಾ ಸಿದ್ಧರಾಮಯ್ಯಾ.