ಬೀಜದೊಳಗೆ ಅಂಕುರವಿರ್ಪುದು. ಅಂಕುರದೊಳಗೆ ಬೀಜವಿರ್ಪುದು. ಅಂಕುರ ಬೀಜವೆಂದು ಹೆಸರು ಎರಡಾದಡೇನು ? ಒಳಗಿರ್ಪ ಸಾರವು ಒಂದೇ ಆಗಿರ್ಪಂತೆ ಬಸವಣ್ಣನೆ ಶಿವನು ಶಿವನೆ ಬಸವಣ್ಣನು. ಬಸವಣ್ಣ ಶಿವನೆಂಬ ಹೆಸರೆರಡಾದಡೇನು ? ಅಖಂಡವಸ್ತು ಒಂದೇ ಆದಕಾರಣ ನಿಮ್ಮ ಅಖಂಡೇಶ್ವರನೆಂದು ಹೆಸರಿಟ್ಟು ಕರೆದೆನಯ್ಯಾ ದೇವರದೇವಾ.