ಬೆಕ್ಕ ನುಂಗಿದ ಕೋಳಿ ಸತ್ತು ಕೂಗಿತ್ತ ಕಂಡೆ. ಕರಿಯ ಕೋಗಿಲೆ ಬಂದು ರವಿಯ ನುಂಗಿತ್ತ ಕಂಡೆ. (ಕರಿಯ ಕೋಗಿಲೆಯ ರವಿ ಬಂದು ನುಂಗಿತ್ತ ಕಂಡೆ ?). ಸೆಜ್ಜೆ ಬೆಂದು ಶಿವದಾರ ಉಳಿಯಿತ್ತು. ಪ್ರಾಣಲಿಂಗವೆಂಬ ಶಬ್ದ ವ್ರತಗೇಡಿಯಾಯಿತ್ತು ನೀರ ಮೇಲಣ ಹೆಜ್ಜೆಯನಾರು ಬಲ್ಲವರಿಲ್ಲ. ಗುಹೇಶ್ವರನೆಂಬ ಶಬ್ದ ಅಲ್ಲಿಯೂ ಇಲ್ಲ
ಇಲ್ಲಿಯೂ ಇಲ್ಲ.