ಬೆಳಗಿನೊಳಗಣ ಬೆಳಗು ಮಹಾಬೆಳಗೆಂಬ ಪ್ರಸಾದದಲ್ಲಿ ಒದಗಿದ ಪ್ರಸಾದಿಯ ಪರಿಣಾಮದ ಪರಮಾನಂದವನೇನೆಂದುಪಮಿಸುವೆನಯ್ಯಾ ಪರಮಾಶ್ರಯವೇ ತಾನಾಗಿ ಕೂಡಲಸಂಗಮದೇವಯ್ಯಾ ಚೆನ್ನಬಸವಣ್ಣನೆಂಬ ಮಹಾಪ್ರಸಾದಿ ಎನ್ನ ವಾಙ್ಮನಕ್ಕಗೋಚರನಾ[ಗೆ] ನಾನೇನೆಂಬೆನಯ್ಯಾ.