ಬೇಂದ್ರೆಯವರ ಭಾವಗೀತೆ
ಸಂಪಾದಿಸಿ- ಬೇಂದ್ರೆಯವರ ಕವನ, ಧಾರವಾಡದಿಂದ ಪ್ರಕಟಗೊಳ್ಳುತ್ತಿದ್ದ ‘ಸ್ವಧರ್ಮ’ ಎನ್ನುವ ಪತ್ರಿಕೆಯಲ್ಲಿ. ಬೆಳಗು’ ಕವಿತೆಯು ಮೊದಲು ಪ್ರಕಟಗೊಂಡಿತು. 1932ರಲ್ಲಿ ಪ್ರಕಟಗೊಂಡ ಬೇಂದ್ರೆಯವರ 'ಗರಿ' ಕವನ ಸಂಕಲನದಲ್ಲಿದೆ. ಅದರಲ್ಲಿ ಮೊದಲ ಕವನವಾದ ಈ ಕವಿತೆಯು ರಚನೆಗೊಂಡದ್ದು 1919ರಲ್ಲಿ, 2019ರಲ್ಲಿಯೂ ಪ್ರಸಿದ್ಧವಾಗಿದೆ.
-ಬೆಳಗು-
1
ಮೂಡಲ ಮನೆಯಾ ಮುತ್ತಿನ ನೀರಿನ
ಎರಕ$ವ ಹೊಯ್ದಾ
ನುಣ್ಣ-ನ್ನೆರಕsವ ಹೊಯ್ದಾ
ಬಾಗಿಲ ತೆರೆದೂ ಬೆಳಕು ಹರಿದೂ
ಜಗವೆಲ್ಲಾ ತೊಯ್ದಾ
ಹೋಯ್ತೋ-ಜಗವೆಲ್ಲಾ ತೊಯ್ದಾ.
2
ರತ್ನದ ರಸದಾ ಕಾರಂಜೀಯೂ
ಪುಟಪುಟನೇ ಪುಟಿದು
ತಾನೇ-ಪುಟಪುಟನೇ ಪುಟಿದು
ಮಘಮಘಿಸುವಾ ಮುಗಿದ ಮೊಗ್ಗೀ
ಪಟಪಟನೇ ಒಡೆದು
ತಾನೇ-ಪಟಪಟನೇ ಒಡೆದು.
3
ಎಲೆಗಳ ಮೇಲೇ ಹೂಗಳ ಒಳಗೇ
ಅಮೃತsದ ಬಿಂದು
ಕಂಡವು-ಅಮೃತ$ದ ಬಿಂದು
ಯಾರಿರಿಸಿಕರುವರು ಮುಗಿಲsಮೇಲಿಂ-
ದಿಲ್ಲಿಗೇ ತಂದು
ಈಗ-ಇಲ್ಲಿಗೇ ತಂದು.
4
ತಂಗಾಳಿಯಾ ಕೈಯೊಳಗಿರಿಸೀ
ಎಸಳೀನಾ ಚವರಿ
ಹೂವಿನ-ಎಸಳೀನಾ ಚವರಿ
ಹಾರಿಸಿಬಿಟ್ಟರು ತುಂಬಿಯ ದಂಡು
ಮೈಯೆಲ್ಲಾ ಸವರಿ
ಗಂಧಾ-ಮೈಯೆಲ್ಲಾ ಸವರಿ.
5
ಗಿಡಗಂಟೆಯಾ ಕೊರಳೊಳಗಿಂದ
ಹಕ್ಕೀಗಳ ಹಾಡು
ಹೊರಟಿತು-ಹಕ್ಕೀಗಳ ಹಾಡು.
ಗಂಧರ್ವರಾ ಸೀಮೆಯಾಯಿತು
ಕಾಡಿನಾ ನಾಡು
ಕ್ಷಣದೊಳು-ಕಾಡಿನಾ ನಾಡು.
6
ಕಂಡಿತು ಕಣ್ಣು ಸವಿದಿತು ನಾಲಗೆ
ಪಡೆದೀತೀ ದೇಹ
ಸ್ಪರ್ಶಾ-ಪಡೆದೀತೀ ದೇಹ.
ಕೇಳಿತು ಕಿವಿಯು ಮೂಸಿತು ಮೂಗು
ತನ್ಮಯವೀ ಗೇಹಾ
ದೇವರ-ದೀ ಮನಸಿನ ಗೇಹಾ.
7
ಅರಿಯದು ಅಳವು ತಿಳಿಯದು ಮನವು
ಕಾಣ$ದೋ ಬಣ್ಣಾ
ಕಣ್ಣಿಗೆ-ಕಾಣsದೋ ಬಣ್ಣಾ
ಶಾಂತೀರಸವೇ ಪ್ರೀತಿಯಿಂದಾ
ಮೈದೋರಿತಣ್ಣಾ
ಇದು ಬರಿ-ಬೆಳಗಲ್ಲೋ ಅಣ್ಣಾ.[೧]
- (ದ.ರಾ. ಬೇಂದ್ರೆ
ನೋಡಿ
ಸಂಪಾದಿಸಿಪರಿವಿಡಿ
ಸಂಪಾದಿಸಿಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ
ಉಲ್ಲೇಖ
ಸಂಪಾದಿಸಿ- ↑ ಕವನ ಸಂಕಲನ 'ಗರಿ' ಲೇಖಕರು ದ.ರಾ. ಬೇಂದ್ರೆ