ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ ತಿಳಿಯಲೀಯದು ಎಚ್ಚರಲೀಯದು. ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯಾ ಲಿಂಗತಂದೆ ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವಾ. 50