ಬೇರಿಲ್ಲದ ಗಿಡುವಿಂಗೆ ಪರಿಮಳವಿಲ್ಲದ ಪುಷ್ಪ ಹುಟ್ಟಿ
ರೂಹಿಲ್ಲದ ಅನಲನು ಅವಗ್ರಹಿಸಿತ್ತು ನೋಡಾ ! ವೃಕ್ಷವಿಲ್ಲದ ದಳದಲ್ಲಿ ಒಂದು ಪಕ್ಷಿ ಹುಟ್ಟಿತ್ತು ನೋಡಾ ! ಅತ್ತಲಿತ್ತಲು ಕಾಣದೆ ನೆತ್ತಿಯ ನಯನದಲ್ಲಿ ನೋಡಿತ್ತಲ್ಲಾ ! ನಿತ್ಯಾನಂದಪರಿಪೂರ್ಣದ ನಿಲವಿನ
ಅಮೃತಬಿಂದುವಿನ ರಸವ ದಣಿಯುಂಡು
ಪಶ್ಚಿಮದಲ್ಲಿ ಗುಹೇಶ್ವರಲಿಂಗವ ಸ್ವೀಕರಿಸಿತ್ತಲ್ಲಾ.